Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಕೈವ್ ನಲ್ಲಿ ಗಾಂಧಿ ಪ್ರತಿಮೆಗೆ ಪ್ರಧಾನ ಮಂತ್ರಿಯವರಿಂದ ಗೌರವ ನಮನ

ಕೈವ್ ನಲ್ಲಿ ಗಾಂಧಿ ಪ್ರತಿಮೆಗೆ ಪ್ರಧಾನ ಮಂತ್ರಿಯವರಿಂದ ಗೌರವ ನಮನ


ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಕೈವ್ ನಲ್ಲಿರುವ ಮಹಾತ್ಮಾ ಗಾಂಧಿಯವರ ಪ್ರತಿಮೆಗೆ ಗೌರವ ನಮನ ಸಲ್ಲಿಸಿದರು.

ಸಾಮರಸ್ಯದ ಸಮಾಜವನ್ನು ನಿರ್ಮಿಸುವಲ್ಲಿ ಮಹಾತ್ಮ ಗಾಂಧಿಯವರ ಶಾಂತಿ ಸಂದೇಶದ ಕಾಲಾತೀತ ಪ್ರಸ್ತುತತೆಯನ್ನು ಪ್ರಧಾನ ಮಂತ್ರಿಯವರು ಒತ್ತಿ ಹೇಳಿದರು. ಮಹಾತ್ಮ ಗಾಂಧಿಯವರು ತೋರಿಸಿದ ಮಾರ್ಗವು ಇಂದಿನ ಜಾಗತಿಕ ಸವಾಲುಗಳಿಗೆ ಪರಿಹಾರಗಳನ್ನು ನೀಡಿದೆ ಎಂದು ಅವರು ತಿಳಿಸಿದರು.

ಕೈವ್ ನಲ್ಲಿರುವ ‘ಓಯಸಿಸ್ ಆಫ್ ಪೀಸ್’ ಪಾರ್ಕ್ ನಲ್ಲಿರುವ ಮಹಾತ್ಮ ಗಾಂಧಿಯವರ ಪ್ರತಿಮೆಯು ಮಾನವೀಯತೆಗೆ ಭರವಸೆ ಮತ್ತು ಶಾಂತಿಯ ದೀಪವಾಗಿದೆ.

*****