Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಕೊರಿಯಾ ಗಣರಾಜ್ಯದ ಅಧ್ಯಕ್ಷರ ಜತೆ ಪ್ರಧಾನಮಂತ್ರಿ ಮಾತುಕತೆ

ಕೊರಿಯಾ ಗಣರಾಜ್ಯದ ಅಧ್ಯಕ್ಷರ ಜತೆ ಪ್ರಧಾನಮಂತ್ರಿ ಮಾತುಕತೆ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 10 ಸೆಪ್ಟೆಂಬರ್ 2023 ರಂದು ನವದೆಹಲಿಯಲ್ಲಿ ನಡೆದ G20 ಶೃಂಗಸಭೆಯ ನೇಪಥ್ಯದಲ್ಲಿ ಕೊರಿಯಾ ಗಣರಾಜ್ಯದ ಅಧ್ಯಕ್ಷರಾದ ಶ್ರೀ ಯೂನ್ ಸುಕ್ ಯೆಯೋಲ್ ಅವರೊಂದಿಗೆ ಮಾತುಕತೆ ನಡೆಸಿದರು.

ಜಿ 20 ಅಧ್ಯಕ್ಷತೆಗಾಗಿ ಪ್ರಧಾನಮಂತ್ರಿಯವರನ್ನು ಅಧ್ಯಕ್ಷ ಯುನ್ ಸುಕ್ ಯೋಲ್ ಅವರನ್ನು ಅಭಿನಂದಿಸಿದರು. ಚಂದ್ರಯಾನ ಮಿಷನ್‌ನ ಯಶಸ್ಸಿಗಾಗಿಯೂ ಪ್ರಧಾನಿಯವರನ್ನು ಅಭಿನಂದಿಸಿದರು.

ಪ್ರಸಕ್ತ ವರ್ಷ ರಾಜತಾಂತ್ರಿಕ ಸಂಬಂಧಗಳ ಸ್ಥಾಪನೆಯ 50ನೇ ವಾರ್ಷಿಕೋತ್ಸವ ಆಚರಿಸಲಾಗುತ್ತಿದೆ ಎಂದು ಉಭಯ ನಾಯಕರು ಗಮನ ಸೆಳೆದರು. ವ್ಯಾಪಾರ ಮತ್ತು ಹೂಡಿಕೆ, ರಕ್ಷಣಾ ಉತ್ಪಾದನೆ, ಸೆಮಿಕಂಡಕ್ಟರ್‌ಗಳು ಮತ್ತು ವಿದ್ಯುನ್ಮಾನ ಬ್ಯಾಟರಿ ತಂತ್ರಜ್ಞಾನ ಸೇರಿದಂತೆ ದ್ವಿಪಕ್ಷೀಯ ವಿಶೇಷ ಕಾರ್ಯತಂತ್ರದ ಪಾಲುದಾರಿಕೆಯ ವಿವಿಧ ಕ್ಷೇತ್ರಗಳಲ್ಲಿ ಪ್ರಗತಿ ಕುರಿತು ಉಭಯ ನಾಯಕರು ಚರ್ಚಿಸಿದರು.

ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳ ಬಗ್ಗೆ ಉಭಯ ನಾಯಕರು ತಮ್ಮ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು.

****