Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಕೋವಿಡ್ -19 ಸಾಂಕ್ರಾಮಿಕಕ್ಕೂ ಮೊದಲಿನ ಹೆಚ್ಚಿನ ಸಂಖ್ಯೆಯ ಪ್ರಯಾಣಿಕರ ಸಂಚಾರಕ್ಕಾಗಿ ಭಾರತ ನಾಗರಿಕ ವಿಮಾನಯಾನ ಕ್ಷೇತ್ರವನ್ನು ಶ್ಲಾಘಿಸಿದ ಪ್ರಧಾನಿ


ಭಾರತದ ನಾಗರಿಕ ವಿಮಾನಯಾನ ಕ್ಷೇತ್ರವು ಪ್ರತಿದಿನ 4 ಲಕ್ಷ ಪ್ರಯಾಣಿಕರ ಸಂಚಾರವನ್ನು ತಲುಪಿರುವುದಕ್ಕೆ ಹಾಗೂ ಕೋವಿಡ್ -19  ಸಾಂಕ್ರಾಮಿಕಕ್ಕೂ ಮೊದಲಿನ ಹೆಚ್ಚಿನ ಸಂಖ್ಯೆಯನ್ನು ಸಾಧಿಸಿದ್ದಕ್ಕಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ‘ಸುಗಮ ಜೀವನ’ ಮತ್ತು ಆರ್ಥಿಕ ಪ್ರಗತಿಗೆ ಮುಖ್ಯವಾಗಿರುವ ಸಂಪರ್ಕ ಕ್ಷೇತ್ರವನ್ನು ಭಾರತದಾದ್ಯಂತ ಇನ್ನಷ್ಟು ಸುಧಾರಿಸಲು ಗಮನಹರಿಸಲಾಗಿದೆ ಎಂದು ಶ್ರೀ ಮೋದಿ ಹೇಳಿದ್ದಾರೆ.

ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರ ಟ್ವೀಟ್ ಅನ್ನು ಉಲ್ಲೇಖಿಸಿರುವ ಪ್ರಧಾನಿಯವರು,

“ಇದೊಂದು ಉತ್ತಮ ಸೂಚನೆ. ‘ಸುಗಮ ಜೀವನ’ ಮತ್ತು ಆರ್ಥಿಕ ಪ್ರಗತಿಗೆ ಮುಖ್ಯವಾಗಿರುವ ಸಂಪರ್ಕ ಕ್ಷೇತ್ರವನ್ನು ಭಾರತದಾದ್ಯಂತ ಇನ್ನಷ್ಟು ಸುಧಾರಿಸಲು ಗಮನಹರಿಸಲಾಗಿದೆ” ಎಂದು ಹೇಳಿದ್ದಾರೆ.

*******