Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಕೌಶಲ ಅಭಿವೃದ್ಧಿಯಲ್ಲಿನ ಸಹಕಾರಕ್ಕಾಗಿ ಭಾರತ ಮತ್ತು ಸ್ವಿಸ್ ಒಕ್ಕೂಟದ ನಡುವೆ ಆಗಿರುವ ತಿಳಿವಳಿಕೆ ಒಪ್ಪಂದಕ್ಕೆ ಸಂಪುಟದ ಅನುಮೋದನೆ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆ ಕೌಶಲ ಅಭಿವೃದ್ಧಿಯ ಸಹಕಾರಕ್ಕಾಗಿ ಸ್ವಿಸ್ ಒಕ್ಕೂಟದ ಶಿಕ್ಷಣ, ಸಂಶೋಧನೆ ಮತ್ತು ನಾವಿನ್ಯತೆಯ ಸರ್ಕಾರಿ ನಿರ್ದೇಶನಾಲಯ ಮತ್ತು ಭಾರತದ ನಡುವೆ ಸಹಿ ಹಾಕಲಾಗಿರುವ ತಿಳಿವಳಿಕೆ ಒಪ್ಪಂದಕ್ಕೆ ಪೂರ್ವಾನ್ವಯವಾಗಿ ತನ್ನ ಅನುಮೋದನೆ ನೀಡಿದೆ. ಕೌಶಲ ಅಭಿವೃದ್ಧಿ ಮತ್ತು ಉದ್ಯಮಶೀಲತೆ (ಸ್ವತಂತ್ರ ನಿರ್ವಹಣೆ) ಖಾತೆ ಸಹಾಯಕ ಸಚಿವರ ನೇತೃತ್ವದ ನಿಯೋಗ 2016ರ ಜೂನ್ 20ರಿಂದ 22ರವರೆಗೆ ಸ್ವಿಜರ್ಲ್ಯಾಂಡ್ ಗೆ ಭೇಟಿ ನೀಡಿದ್ದ ವೇಳೆ 22.6.2016ರಂದು ಈ ತಿಳಿವಳಿಕೆ ಒಪ್ಪಂದಕ್ಕೆ ಸಹಿ ಹಾಕಲಾಗಿತ್ತು.

ಈ ತಿಳಿವಳಿಕೆ ಒಪ್ಪಂದವು ಕೌಶಲ ಅಭಿವೃದ್ಧಿ ಕ್ಷೇತ್ರದಲ್ಲಿ ಸಾಮರ್ಥ್ಯವರ್ಧನೆ ಮತ್ತು ಉತ್ತಮ ಪದ್ಧತಿಗಳ ವಿನಿಮಯಕ್ಕೆ ವಿಶಾಲವಾಗಿ ಗಮನ ಹರಿಸುತ್ತದೆ. ಈ ತಿಳಿವಳಿಕೆ ಒಪ್ಪಂದವು ಎಂ.ಓ.ಯು.ಗಾಗಿ ಚೌಕಟ್ಟಿನ ಜಾರಿಯ ಪರಾಮರ್ಶೆ, ಉಸ್ತುವಾರಿಗಾಗಿ ಜಂಟಿ ಕಾರ್ಯ ಗುಂಪು (ಜೆಡಬ್ಲ್ಯುಜಿ) ಸ್ಥಾಪನೆಗೆ ಅವಕಾಶ ನೀಡುತ್ತದೆ. ಈ ಎಂ.ಓ.ಯು. ಕೌಶಲ ಅಭಿವೃದ್ಧಿ ಕ್ಷೇತ್ರದಲ್ಲಿ ಎರಡೂ ರಾಷ್ಟ್ರಗಳ ನಡುವೆ ದ್ವಿಪಕ್ಷೀಯ ಸಹಕಾರಕ್ಕಾಗಿ ಚೌಕಟ್ಟನ್ನು ಸ್ಥಾಪಿಸುತ್ತದೆ ಮತ್ತು ಅಧಿಕೃತಗೊಳಿಸುತ್ತದೆ ಹಾಗೂ ಪಾಲುದಾರಿಕೆಯನ್ನು ಆಳಗೊಳಿಸುತ್ತದೆ.

***

AKT/SHB