Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

​​​​​​​ಖ್ಯಾತ ಶಾಸ್ತ್ರೀಯ ಗಾಯಕಿ ಡಾ. ಪ್ರಭಾ ಅತ್ರೆ ಅವರ ನಿಧನಕ್ಕೆ ಪ್ರಧಾನಮಂತ್ರಿಗಳ ಸಂತಾಪ 


ಖ್ಯಾತ ಶಾಸ್ತ್ರೀಯ ಗಾಯಕಿ ಡಾ. ಪ್ರಭಾ ಅತ್ರೆ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ‘ಎಕ್ಸ್”ನಲ್ಲಿ ಸಂದೇಶ ಪೋಸ್ಟ್ ಮಾಡಿರುವ  ಅವರು,

“ಡಾ. ಪ್ರಭಾ ಅತ್ರೆ ಅವರು ಭಾರತೀಯ ಶಾಸ್ತ್ರೀಯ ಸಂಗೀತ ಕ್ಷೇತ್ರದ ದಿಗ್ಗಜರಾಗಿದ್ದರು. ಅವರ ಕೊಡುಗೆಯು ಭಾರತದಲ್ಲಿ ಮಾತ್ರವಲ್ಲದೆ ಪ್ರಪಂಚದಾದ್ಯಂತ ಪ್ರಶಂಸೆಗೆ ಪಾತ್ರವಾಗಿದೆ. ಅವರ ಜೀವನವು ಶ್ರೇಷ್ಠತೆ ಮತ್ತು ಸಮರ್ಪಣೆಯ ಸ್ವರಮೇಳವಾಗಿತ್ತು. ಅವರ ಪ್ರಯತ್ನಗಳು ನಮ್ಮ ಸಾಂಸ್ಕೃತಿಕ ರಚನೆಯನ್ನು ಹೆಚ್ಚು ಶ್ರೀಮಂತಗೊಳಿಸಿವೆ. ಅವರ ನಿಧನದಿಂದ ತೀವ್ರ ನೋವಾಗಿದ್ದು, ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ನನ್ನ ಸಾಂತ್ವನಗಳು. ಓಂ ಶಾಂತಿ” ಎಂದು ಸಂತಾಪ ಸಲ್ಲಿಸಿದ್ದಾರೆ.

***