Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಖ್ಯಾತ ಸಂತೂರ್ ಮಾಂತ್ರಿಕ ಪಂಡಿತ್ ಶಿವಕುಮಾರ್ ಶರ್ಮಾ ಅವರ ನಿಧನಕ್ಕೆ ಸಂತಾಪ ಸೂಚಿಸಿದ ಪ್ರಧಾನಮಂತ್ರಿ


ಖ್ಯಾತ ಸಂತೂರ್ ಮಾಂತ್ರಿಕರಾದ ಪಂಡಿತ್ ಶಿವಕುಮಾರ್ ಶರ್ಮಾ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದರು.

ಪ್ರಧಾನಮಂತ್ರಿ ಅವರು ತಮ್ಮ ಟ್ವೀಟ್ ಸಂದೇಶದಲ್ಲಿ ಹೀಗೆ ತಿಳಿಸಿದ್ದಾರೆ;

“ಪಂಡಿತ್ ಶಿವಕುಮಾರ್ ಶರ್ಮಾ ಜೀ ಅವರ ನಿಧನದಿಂದ ನಮ್ಮ ಸಾಂಸ್ಕೃತಿಕ ಜಗತ್ತು ಬಡವಾಗಿದೆ. ಅವರು ಸಂತೂರನ್ನು ಜಾಗತಿಕ ಮಟ್ಟದಲ್ಲಿ ಜನಪ್ರಿಯಗೊಳಿಸಿದರು. ಅವರ ಸಂಗೀತವು ಮುಂಬರುವ ಪೀಳಿಗೆಯನ್ನು ಮೂಕವಿಸ್ಮಯಗೊಳಿಸಲಿದೆ. ಅವರೊಂದಿಗೆ ನನ್ನ ಸಂವಾದವನ್ನು ನಾನು ಪ್ರೀತಿಯಿಂದ ನೆನಪಿಸಿಕೊಳ್ಳುತ್ತೇನೆ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ನನ್ನ ಸಂತಾಪಗಳು. ಓಂ ಶಾಂತಿ.”

*****