Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಗಂಧದ ಗುಡಿ ಚಿತ್ರ ಟ್ರೈಲರ್ ಬಿಡುಗಡೆ ಸಂದರ್ಭದಲ್ಲಿ ಶುಭ ಹಾರೈಸಿದ ಪ್ರಧಾನಿ


ಕರ್ನಾಟಕದ ಪ್ರಕೃತಿ ಸೌಂದರ್ಯ ಮತ್ತು ಪರಿಸರ ಸಂರಕ್ಷಣೆಗೆ ಗೌರವ ಸಲ್ಲಿಸುವ ಕನ್ನಡ ನಟ ದಿವಂಗತ ಪುನೀತ್ ರಾಜ್‌ಕುಮಾರ್ ಅವರ ಕೊನೆಯ ಯೋಜನೆಯಾದ ಗಂಧದ ಗುಡಿ ಚಿತ್ರದ ಟ್ರೈಲರ್ ಬಿಡುಗಡೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶುಭಾಶಯಗಳನ್ನು ತಿಳಿಸಿದ್ದಾರೆ. ದಿವಂಗತ ಪುನೀತ್ ರಾಜ್‌ಕುಮಾರ್ ಪ್ರಪಂಚದಾದ್ಯಂತ ಲಕ್ಷಾಂತರ ಜನರ ಹೃದಯದಲ್ಲಿ ವಾಸಿಸುತ್ತಿದ್ದಾರೆ ಎಂದು ಪ್ರಧಾನಿ ಹೇಳಿದ್ದಾರೆ.

ಕನ್ನಡದ ದಿವಂಗತ ನಟ ಪುನೀತ್ ರಾಜ್‌ಕುಮಾರ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರ ಟ್ವೀಟ್ ಅನ್ನು ಉಲ್ಲೇಖಿಸಿ, ಪ್ರಧಾನಿಯವರು ಟ್ವೀಟ್ ಮಾಡಿದ್ದಾರೆ;

“ಅಪ್ಪು ಪ್ರಪಂಚದಾದ್ಯಂತ ಲಕ್ಷಾಂತರ ಜನರ ಹೃದಯದಲ್ಲಿ ನೆಲೆಸಿದ್ದಾರೆ. ಅವರು ತೇಜಸ್ಸಿನ ಪ್ರತೀಕ, ಚೈತನ್ಯದ ಚಿಲುಮೆ ಮತ್ತು ಸರಿಸಾಟಿಯಿಲ್ಲದ ಪ್ರತಿಭಾವಂತರಾಗಿದ್ದರು.  ವ್ಯಕ್ತಿಯಾಗಿದ್ದರು. #GandhadaGudi ಪ್ರಕೃತಿ ಮಾತೆಗೆ, ಕರ್ನಾಟಕದ ನೈಸರ್ಗಿಕ ಸೌಂದರ್ಯ ಮತ್ತು ಪರಿಸರ ಸಂರಕ್ಷಣೆಗೆ ಸಲ್ಲಿಸುತ್ತಿರುವ ಗೌರವವಾಗಿದೆ. ಈ ಪ್ರಯತ್ನಕ್ಕೆ ನನ್ನ ಶುಭಾಶಯಗಳು” ಎಂದು ಪ್ರಧಾನಿಯವರು ಟ್ವೀಟ್‌ ಮಾಡಿದ್ದಾರೆ.

*****