Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಗಾಝಾದ ಅಲ್ ಅಹ್ಲಿ ಆಸ್ಪತ್ರೆಯಲ್ಲಿ ಸಂಭವಿಸಿದ ದುರಂತ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಗಾಝಾದ ಅಲ್ ಅಹ್ಲಿ ಆಸ್ಪತ್ರೆಯಲ್ಲಿ ಸಂಭವಿಸಿದ ದುರಂತ ಜೀವಹಾನಿಗೆ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.

ಶ್ರೀ ನರೇಂದ್ರ ಮೋದಿ ಅವರು ಸಂತ್ರಸ್ತರ ಕುಟುಂಬಗಳಿಗೆ ಹೃತ್ಪೂರ್ವಕ ಸಂತಾಪ ವ್ಯಕ್ತಪಡಿಸಿದರು ಮತ್ತು ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದರು.

ಎಕ್ಸ್ ಖಾತೆಯಲ್ಲಿ ಪ್ರಧಾನಮಂತ್ರಿ ಅವರು ಹೀಗೆ ಹೇಳಿದ್ದಾರೆ;

“ಗಾಜಾದ ಅಲ್ ಅಹ್ಲಿ ಆಸ್ಪತ್ರೆಯಲ್ಲಿ ಸಂಭವಿಸಿದ ದುರಂತ ಜೀವಹಾನಿಯಿಂದ ತೀವ್ರ ಆಘಾತವಾಗಿದೆ. ಸಂತ್ರಸ್ತರ ಕುಟುಂಬಗಳಿಗೆ ನಮ್ಮ ಹೃತ್ಪೂರ್ವಕ ಸಂತಾಪಗಳು ಮತ್ತು ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇವೆ. ನಡೆಯುತ್ತಿರುವ ಸಂಘರ್ಷದಲ್ಲಿ ನಾಗರಿಕರ ಸಾವುನೋವುಗಳು ಗಂಭೀರ ಮತ್ತು ನಿರಂತರ ಕಾಳಜಿಯ ವಿಷಯವಾಗಿದೆ. ಇದಕ್ಕೆ ಸಂಬಂಧಪಟ್ಟವರನ್ನು ಹೊಣೆಗಾರರನ್ನಾಗಿ ಮಾಡಬೇಕು,’’ ಎಂದು ಆಗ್ರಹಿಸಿದ್ದಾರೆ.

 

***