Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಗ್ರೀಸ್ ಪ್ರಧಾನ ಮಂತ್ರಿಯೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಭೆ

ಗ್ರೀಸ್ ಪ್ರಧಾನ ಮಂತ್ರಿಯೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಭೆ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಗಸ್ಟ್ 25 ರಂದು ಅಥೆನ್ಸ್ನಲ್ಲಿ ಗ್ರೀಸ್‌ನ ಪ್ರಧಾನ ಮಂತ್ರಿ ಶ್ರೀ ಕಿರಿಯಾಕೋಸ್ ಮಿಟ್ಸೋಟಾಕಿಸ್.

ಉಭಯ ನಾಯಕರು ನಿಯೋಗ ಮಟ್ಟದ ಮಾತುಕತೆ ನಡೆಸಿದರು. ಗ್ರೀಸ್ನಲ್ಲಿ ಸಂಭವಿಸಿದ ಕಾಡ್ಗಿಚ್ಚಿನ ದುರಂತ ಘಟನೆಗಳಲ್ಲಿ ಪ್ರಾಣಹಾನಿ ಮತ್ತು ಆಸ್ತಿಪಾಸ್ತಿಗಳಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಸಂತಾಪ ಸೂಚಿಸಿದರು.

ಚಂದ್ರಯಾನ ಮಿಷನ್ನ ಯಶಸ್ಸಿಗೆ ಪ್ರಧಾನ ಮಂತ್ರಿ ಮಿತ್ಸೋಟಾಕಿಸ್ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಭಿನಂದಿಸಿದರು, ಇದು ಮಾನವೀಯತೆಯ ಯಶಸ್ಸು ಎಂದು ಬಣ್ಣಿಸಿದರು.

ವ್ಯಾಪಾರ ಮತ್ತು ಹೂಡಿಕೆ, ರಕ್ಷಣೆ ಮತ್ತು ಭದ್ರತೆ, ತಂತ್ರಜ್ಞಾನ, ಮೂಲಸೌಕರ್ಯ, ಡಿಜಿಟಲ್ ಪಾವತಿ, ಶಿಪ್ಪಿಂಗ್, ಫಾರ್ಮಾ, ಕೃಷಿ, ವಲಸೆ ಮತ್ತು ಚಲನಶೀಲತೆ, ಪ್ರವಾಸೋದ್ಯಮ, ಕೌಶಲ್ಯ ಅಭಿವೃದ್ಧಿ, ಸಂಸ್ಕೃತಿ, ಶಿಕ್ಷಣ ಮತ್ತು ಜನರೊಂದಿಗಿನ ಜನರ ಸಂಬಂಧಗಳು ಸೇರಿದಂತೆ ದ್ವಿಪಕ್ಷೀಯ ಪಾಲುದಾರಿಕೆಯ ವಿವಿಧ ಆಯಾಮಗಳ ಬಗ್ಗೆ ಉಭಯ ನಾಯಕರು ಚರ್ಚೆ ನಡೆಸಿದರು.
ಅವರು ಐರೋಪ್ಯ ಒಕ್ಕೂಟ, ಇಂಡೋ-ಪೆಸಿಫಿಕ್ ಮತ್ತು ಮೆಡಿಟರೇನಿಯನ್ ಸೇರಿದಂತೆ ಪ್ರಾದೇಶಿಕ ಮತ್ತು ಬಹುಪಕ್ಷೀಯ ಸಮಸ್ಯೆಗಳ ಬಗ್ಗೆ ಚರ್ಚಿಸಿದರು ಹಾಗೂ ಅಂತಾರಾಷ್ಟ್ರೀಯ ಕಾನೂನು, ಸಾರ್ವಭೌಮತ್ವ ಮತ್ತು ಪ್ರಾದೇಶಿಕ ಸಮಗ್ರತೆಯನ್ನು ಗೌರವಿಸುವಂತೆ ಕರೆ ನೀಡಿದರು.

ಉಭಯ ದೇಶಗಳು ‘ಕಾರ್ಯತಂತ್ರದ ಪಾಲುದಾರಿಕೆ’ ಹೆಚ್ಚಿಸಲು ಒಪ್ಪಿಕೊಂಡಿವೆ.

****