Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಚಂಡಮಾರುತ ಪರಿಸ್ಥಿತಿಯ ಬಗ್ಗೆ ಒಡಿಶಾ ಮುಖ್ಯಮಂತ್ರಿ ಜೊತೆ ಚರ್ಚೆ ನಡೆಸಿದ ಪ್ರಧಾನಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಒಡಿಶಾದಲ್ಲಿ ಕೆಲ ಭಾಗದಲ್ಲಿನ ಚಂಡಮಾರುತದ ಸ್ಥಿತಿಗತಿ ಕುರಿತು ಮುಖ್ಯಮಂತ್ರಿ ಶ್ರೀ ನವೀನ್ ಪಟ್ನಾಯಕ್ ಅವರೊಂದಿಗೆ ಚರ್ಚೆ ನಡೆಸಿದರು.

ಪ್ರಧಾನಮಂತ್ರಿ ಅವರು ತಮ್ಮ ಟ್ವೀಟ್ ನಲ್ಲಿ “ಚಂಡಮಾರುತದ ಪರಿಸ್ಥಿತಿ ಬಗ್ಗೆ ಒಡಿಶಾದ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಜಿ ಅವರೊಂದಿಗೆ ಚರ್ಚಿಸಿದೆ. ಈ ಪ್ರತಿಕೂಲ ಪರಿಸ್ಥಿತಿಯಿಂದ ಹೊರಬರಲು  ಕೇಂದ್ರ ಸಾಧ್ಯವಾದ ಎಲ್ಲ ನೆರವಿನ ಭರವಸೆ ನೀಡುತ್ತದೆ. ಪ್ರತಿಯೊಬ್ಬ ಜನರ ಸುರಕ್ಷತೆ ಮತ್ತು ಯೋಗಕ್ಷೇಮಕ್ಕಾಗಿ ಪ್ರಾರ್ಥಿಸುತ್ತೇನೆ’’ಎಂದು ಹೇಳಿದ್ದಾರೆ.

***