Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಚಿಲಿ ಅಧ್ಯಕ್ಷರನ್ನು ಭೇಟಿ ಮಾಡಿದ ಪ್ರಧಾನಮಂತ್ರಿ

ಚಿಲಿ ಅಧ್ಯಕ್ಷರನ್ನು ಭೇಟಿ ಮಾಡಿದ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ನವೆಂಬರ್ 19ರಂದು ಬ್ರೆಜಿಲ್ ನ ರಿಯೋ ಡಿ ಜನೈರೊದಲ್ಲಿ ನಡೆದ ಜಿ-20 ಶೃಂಗಸಭೆಯ ನೇಪಥ್ಯದಲ್ಲಿ ಚಿಲಿ ಗಣರಾಜ್ಯದ ಅಧ್ಯಕ್ಷರಾದ ಘನತೆವೆತ್ತ ಶ್ರೀ ಗೇಬ್ರಿಯಲ್ ಬೋರಿಕ್ ಫಾಂಟ್ ಅವರನ್ನು ಭೇಟಿಯಾದರು. ಇದು ಅವರ ಮೊದಲ ಭೇಟಿಯಾಗಿತ್ತು.

ಉಭಯ ನಾಯಕರು ದ್ವಿಪಕ್ಷೀಯ ಸಂಬಂಧಗಳ ಬಗ್ಗೆ ಚರ್ಚಿಸಿ, ಉಭಯ ದೇಶಗಳ ಸಹಕಾರವನ್ನು ಬಲಪಡಿಸಲು ಹಲವಾರು ಉಪಕ್ರಮಗಳನ್ನು ಚರ್ಚಿಸಿದರು. ಡಿಜಿಟಲ್ ಸಾರ್ವಜನಿಕ ಮೂಲಸೌಕರ್ಯ, ಆರೋಗ್ಯ, ಐಟಿ, ವಿಜ್ಞಾನ ಮತ್ತು ತಂತ್ರಜ್ಞಾನ, ಬಾಹ್ಯಾಕಾಶ, ನವೀಕರಿಸಬಹುದಾದ ಇಂಧನ ಮತ್ತು ರಕ್ಷಣೆಯಲ್ಲಿ ಭಾರತದ ಪರಾಕ್ರಮವನ್ನು ಪ್ರಧಾನಿಯವರು ಎತ್ತಿ ತೋರಿಸಿದರು. ಈ ಕ್ಷೇತ್ರಗಳಲ್ಲಿ ಚಿಲಿಯೊಂದಿಗೆ ತನ್ನ ಅನುಭವವನ್ನು ಹಂಚಿಕೊಳ್ಳಲು ಭಾರತ ಸಿದ್ಧವಿದೆ ಎಂದು ಕೂಡಾ ಹೇಳಿದರು.

ನಿರ್ಣಾಯಕ ಖನಿಜಗಳ ವಲಯದಲ್ಲಿ ಸಹಕಾರವನ್ನು ಹೆಚ್ಚಿಸಿ, ಉಭಯ ದೇಶಗಳ ಲಾಭಕ್ಕಾಗಿ ಒಟ್ಟಾಗಿ ಕೆಲಸ ಮಾಡಲು ಎರಡೂ ಕಡೆಯವರು ಒಪ್ಪಿಕೊಂಡರು. ಭಾರತ-ಚಿಲಿ ಆದ್ಯತಾ ವ್ಯಾಪಾರ ಒಪ್ಪಂದದ (ಪಿಟಿಎ) ವಿಸ್ತರಣೆಯ ನಂತರ ವ್ಯಾಪಾರ ಸಂಬಂಧಗಳಲ್ಲಿ ನಿರಂತರ ಬೆಳವಣಿಗೆಯ ಬಗ್ಗೆ ಉಭಯ ನಾಯಕರು ತೃಪ್ತಿ ವ್ಯಕ್ತಪಡಿಸಿ, ಆದ್ಯತಾ ವ್ಯಾಪಾರ ಒಪ್ಪಂದವನ್ನು ಮತ್ತಷ್ಟು ವಿಸ್ತರಿಸುವ ಅವಕಾಶಗಳನ್ನು ಹುಡುಕಲು ಒಪ್ಪಿಗೆ ನೀಡಿದರು. ಚಿಲಿಯ ಉದ್ಯಮವನ್ನು ಬೆಂಬಲಿಸಲು ಉತ್ತಮ ಗುಣಮಟ್ಟದ ಮತ್ತು ಕೈಗೆಟುಕುವ ಔಷಧೀಯ ಉತ್ಪನ್ನಗಳು, ಎಂಜಿನಿಯರಿಂಗ್ ಸರಕುಗಳು, ವಾಹನಗಳು ಮತ್ತು ರಾಸಾಯನಿಕಗಳನ್ನು ಪೂರೈಸುವ ಭಾರತದ ಸರ್ಕಾರದ ನಿರಂತರ ಆಸಕ್ತಿಯನ್ನು ಪ್ರಧಾನಿಯವರು ವ್ಯಕ್ತಪಡಿಸಿದರು.

ಶಿಕ್ಷಣ, ಸಂಸ್ಕೃತಿ ಮತ್ತು ಸಾಂಪ್ರದಾಯಿಕ ಜ್ಞಾನ ಕ್ಷೇತ್ರಗಳಲ್ಲಿನ ಸಹಕಾರದ ಸಾಧ್ಯತೆಗಳ ಬಗ್ಗೆಯೂ ಉಭಯ ನಾಯಕರು ಚರ್ಚಿಸಿದರು. ನಿಕಟ ಸಂಪರ್ಕದಲ್ಲಿರಲು ಮತ್ತು ಅಸ್ತಿತ್ವದಲ್ಲಿರುವ ದ್ವಿಪಕ್ಷೀಯ ಸಹಕಾರವನ್ನು ಮತ್ತಷ್ಟು ಬಲಪಡಿಸಲು ಅವರು ಒಪ್ಪಿಕೊಂಡರು.

 

*****