ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಘನತೆವೆತ್ತ ಫುಮಿಯೊ ಕಿಶಿದಾ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿ, ಜಪಾನ್ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡಿದ್ದಕ್ಕಾಗಿ ಅವರಿಗೆ ಅಭಿನಂದನೆ ಸಲ್ಲಿಸಿದರು.
ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ, “ಜಪಾನ್ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡಿದ್ದಕ್ಕಾಗಿ ಅಭಿನಂದಿಸಲು ಘನತೆವೆತ್ತ ಫುಮಿಯೊ ಕಿಶಿದಾ ಅವರಿಗೆ ಕರೆ ಮಾಡಿ ಮಾತನಾಡಿದೆ. ಭಾರತ-ಜಪಾನ್ ವಿಶೇಷ ಕಾರ್ಯತಂತ್ರಾತ್ಮಕ ಮತ್ತು ಜಾಗತಿಕ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸಲು ಹಾಗೂ ಇಂಡೋ-ಪೆಸಿಫಿಕ್ ವಲಯದಲ್ಲಿ ಸಹಕಾರವನ್ನು ಹೆಚ್ಚಿಸಲು ಕಿಶಿದಾ ಅವರೊಂದಿಗೆ ಕೆಲಸ ಮಾಡಲು ನಾನು ಎದುರು ನೋಡುತ್ತಿದ್ದೇನೆ.” ಎಂದಿದ್ದಾರೆ.
***
Spoke with H.E. Fumio Kishida to congratulate him for assuming charge as the Prime Minister of Japan. I look forward to working with him to further strengthen India-Japan Special Strategic and Global Partnership and to enhance cooperation in the Indo-Pacific region. @kishida230
— Narendra Modi (@narendramodi) October 8, 2021