Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

​​​​​​​ಜಮ್ಮು ಮತ್ತು ಕಾಶ್ಮೀರದ ದೋಡಾದಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನಿ ಸಂತಾಪ


ಜಮ್ಮು ಮತ್ತು ಕಾಶ್ಮೀರದ ದೋಡಾದಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ  ಮೃತಪಟ್ಟವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ.

ಪ್ರಧಾನಮಂತ್ರಿಯವರು PMNRF ನಿಂದ 2 ಲಕ್ಷ ರೂ.ಗಳ ಪರಿಹಾರವನ್ನು ಘೋಷಿಸಿದರು. ಗಾಯಗೊಂಡವರಿಗೆ 50,000 ರೂ. ಪರಿಹಾರ ಘೋಷಿಸಲಾಗಿದೆ.

ಈ ಸಂಬಂಧ ಪ್ರಧಾನಿ ಕಾರ್ಯಾಲಯ ಟ್ವೀಟ್ ಮಾಡಿದೆ.

“ಜಮ್ಮು ಮತ್ತು ಕಾಶ್ಮೀರದ ದೋಡಾದಲ್ಲಿ ಸಂಭವಿಸಿದ ಬಸ್ ಅಪಘಾತ ಸುದ್ದಿ ಕೇಳಿ ದುಃಖಕರವಾಗಿದೆ. ತಮ್ಮ ಹತ್ತಿರದ ಮತ್ತು ಆತ್ಮೀಯರನ್ನು ಕಳೆದುಕೊಂಡ ಕುಟುಂಬಗಳಿಗೆ ನನ್ನ ಸಂತಾಪಗಳು. ಗಾಯಾಳುಗಳು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ.

ಪಿಎಂಎನ್‌ಆರ್‌ಎಫ್‌ನಿಂದ 2 ಲಕ್ಷ ರೂ.ಗಳನ್ನು ಮೃತರ‌ ಕುಟುಂಬಗಳಿಗೆ ನೀಡಲಾಗುತ್ತದೆ. ಗಾಯಗೊಂಡವರಿಗೆ 50,000 ರೂ. ಪರಿಹಾರ ಘೋಷಿಸಲಾಗಿದೆ ಎಂದು ಸಂದೇಶ ನೀಡಲಾಗಿದೆ.

***