ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು ಸಂವಿಧಾನ (ಜಮ್ಮು ಮತ್ತು ಕಾಶ್ಮೀರಕ್ಕೆ ಅನ್ವಯಿಸುವ) ತಿದ್ದುಪಡಿ ಆದೇಶ 2017ರ ಮೂಲಕ (ಜಮ್ಮು ಮತ್ತು ಕಾಶ್ಮೀರಕ್ಕೆ ಅನ್ವಯಿಸುವ) ಆದೇಶ, 1954ಕ್ಕೆ ಸಂವಿಧಾನ ತಿದ್ದುಪಡಿಗೆ ಪೂರ್ವಾನ್ವಯ ಅನುಮೋದನೆ ನೀಡಿದೆ.
ಈ ಅನುಮೋದನೆಯು ಜಮ್ಮು ಮತ್ತು ಕಾಶ್ಮೀರ ರಾಜ್ಯದಲ್ಲಿ ಸರಕು ಮತ್ತು ಸೇವೆಗಳ ತೆರಿಗೆ ಆಡಳಿತದ ಅನ್ವಯಕ್ಕೆ ಅವಕಾಶ ನೀಡುತ್ತದೆ.
ಸಂವಿಧಾನ (ಜಮ್ಮು ಮತ್ತು ಕಾಶ್ಮೀರಕ್ಕೆ ಅನ್ವಯಿಸುವ) ತಿದ್ದುಪಡಿ ಆದೇಶ 2017ಕ್ಕೆ ರಾಷ್ಟ್ರಪತಿಗಳ ಒಪ್ಪಿಗೆಯ ಬಳಿಕ ಈಗಾಗಲೇ ಭಾರತೀಯ ಗೆಜೆಟ್ ನಲ್ಲಿ 2017ರ ಜುಲೈ 6ರಂದು ಅಧಿಸೂಚಿಸಲಾಗಿದೆ.
*****
AKT/VBA/SH