Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಜಮ್ಮು ಮತ್ತು ಕಾಶ್ಮೀರದ ಅಭಿವೃದ್ಧಿ ಮತ್ತು ಪ್ರಗತಿ ನಿಟ್ಟಿನಲ್ಲಿ ನಡೆಯುತ್ತಿರುವ ಪ್ರಯತ್ನಗಳಲ್ಲಿ ಇಂದಿನ ಜಮ್ಮು ಮತ್ತು ಕಾಶ್ಮೀರ ಕುರಿತಾದ ಸಭೆ ಪ್ರಮುಖ ಹೆಜ್ಜೆ: ಪ್ರಧಾನಮಂತ್ರಿ

ಜಮ್ಮು ಮತ್ತು ಕಾಶ್ಮೀರದ ಅಭಿವೃದ್ಧಿ ಮತ್ತು ಪ್ರಗತಿ ನಿಟ್ಟಿನಲ್ಲಿ ನಡೆಯುತ್ತಿರುವ ಪ್ರಯತ್ನಗಳಲ್ಲಿ ಇಂದಿನ ಜಮ್ಮು ಮತ್ತು ಕಾಶ್ಮೀರ ಕುರಿತಾದ ಸಭೆ ಪ್ರಮುಖ ಹೆಜ್ಜೆ: ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜಮ್ಮು ಮತ್ತು ಕಾಶ್ಮೀರದ ಅಭಿವೃದ್ಧಿ ಮತ್ತು ಪ್ರಗತಿ ನಿಟ್ಟಿನಲ್ಲಿ ನಡೆಯುತ್ತಿರುವ ಪ್ರಯತ್ನಗಳಲ್ಲಿ ಇಂದಿನ ಜಮ್ಮು ಮತ್ತು ಕಾಶ್ಮೀರದ ರಾಜಕೀಯ ನಾಯಕರ ಸಭೆ ಅತ್ಯಂತ ಪ್ರಮುಖ ಹೆಜ್ಜೆಯಾಗಿದೆ. ಇದರಿಂದ ಅಲ್ಲಿನ ಸರ್ವತೋಮುಖ ಅಭಿವೃದ್ಧಿ ಮತ್ತಷ್ಟು ಹೆಚ್ಚಾಗಲಿದೆ ಎಂದು ಹೇಳಿದ್ದಾರೆ.  

ಸಭೆಯ ನಂತರ ಪ್ರಧಾನಮಂತ್ರಿ ಅವರು ತಮ್ಮ ಸರಣಿ ಟ್ವೀಟ್ ಗಳಲ್ಲಿ ಹೀಗೆ ಹೇಳಿದ್ದಾರೆ.

ಇಂದಿನ ಜಮ್ಮು ಮತ್ತು ಕಾಶ್ಮೀರದ ರಾಜಕೀಯ ನಾಯಕರ ಸಭೆ ಜಮ್ಮು ಮತ್ತು ಕಾಶ್ಮೀರದ ಅಭಿವೃದ್ಧಿ ಮತ್ತು ಪ್ರಗತಿ ನಿಟ್ಟಿನಲ್ಲಿ ನಡೆಯುತ್ತಿರುವ ಪ್ರಯತ್ನಗಳಲ್ಲಿ ಅತ್ಯಂತ ಪ್ರಮುಖ ಹೆಜ್ಜೆಯಾಗಿದೆ. ಇದರಿಂದ ಅಲ್ಲಿನ ಸರ್ವತೋಮುಖ ಅಭಿವೃದ್ಧಿ ಮತ್ತಷ್ಟು ಹೆಚ್ಚಾಗಲಿದೆ

ಜಮ್ಮು ಮತ್ತು ಕಾಶ್ಮೀರದಲ್ಲಿ ತಳಮಟ್ಟದಲ್ಲಿ ಪ್ರಜಾಪ್ರಭುತ್ವವನ್ನು ಬಲವರ್ಧನೆಗೊಳಿಸುವುದು ನಮ್ಮ ಆದ್ಯತೆಯಾಗಿದೆ. ಕ್ಷೇತ್ರಗಳ ಪುನರ್ ವಿಂಗಡನೆ ಅತ್ಯಂತ ಕ್ಷಿಪ್ರಗತಿಯಲ್ಲಿ ಆಗಬೇಕು, ಆಗ ಚುನಾವಣೆ ನಡೆಯಲಿದೆ ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ  ಚುನಾಯಿತ ಸರ್ಕಾರ ಅಸ್ಥಿತ್ವಕ್ಕೆ ಬರಲಿದೆ. ಇದು ಜಮ್ಮು ಮತ್ತು ಕಾಶ್ಮೀರದ ಪ್ರಗತಿಗಾಥೆಗೆ ಶಕ್ತಿ ತುಂಬಲಿದೆ.

ನಮ್ಮ ಪ್ರಜಾಪ್ರಭುತ್ವದ ಅತಿ ದೊಡ್ಡ ಶಕ್ತಿ ಎಂದರೆ, ಜೊತೆಯಾಗಿ ಕುಳಿತು ಪರಸ್ಪರ ವಿಚಾರ ವಿನಿಮಯ ಮಾಡಿಕೊಳ್ಳುವ ಸಾಮರ್ಥ್ಯವಿರುವುದು. ನಾನು ಜಮ್ಮು ಮತ್ತು ಕಾಶ್ಮೀರದ ನಾಯಕರಿಗೆ ಹೇಳಿದ್ದೆಂದರೆ, ಜನರು ವಿಶೇಷವಾಗಿ ಯುವಜನರಿಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ರಾಜಕೀಯ ನಾಯಕತ್ವ ನೀಡಬೇಕು ಮತ್ತು ಅವರ ಆಕಾಂಕ್ಷೆಗಳು ಸಂಪೂರ್ಣವಾಗಿ ಈಡೇರಿಸುವ ಭರವಸೆಯನ್ನು ಖಾತ್ರಿಪಡಿಸಬೇಕು”.

***