Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಜಮ್ಮು ಮತ್ತು ಕಾಶ್ಮೀರದ ಶಾಸಕರಾದ ಶ್ರೀ ದೇವೇಂದರ್ ಸಿಂಗ್ ರಾಣಾ ಅವರ ನಿಧನಕ್ಕೆ ಪ್ರಧಾನಮಂತ್ರಿಯವರಿಂದ ಸಂತಾಪ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಜಮ್ಮು ಮತ್ತು ಕಾಶ್ಮೀರದ ಶಾಸಕರಾದ ಶ್ರೀ ದೇವೇಂದರ್ ಸಿಂಗ್ ರಾಣಾ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.   

ಪ್ರಧಾನಮಂತ್ರಿಯವರು Xನಲ್ಲಿ:

“ಶ್ರೀ ದೇವೇಂದ್ರ ಸಿಂಗ್ ರಾಣಾ ಜಿ ಅವರ ಅಕಾಲಿಕ ನಿಧನವು ಆಘಾತಕಾರಿಯಾಗಿದೆ. ಅವರು ಹಿರಿಯ ನಾಯಕರಾಗಿದ್ದು, ಜಮ್ಮು ಮತ್ತು ಕಾಶ್ಮೀರದ ಪ್ರಗತಿಗಾಗಿ ಶ್ರದ್ಧೆಯಿಂದ ಕೆಲಸ ಮಾಡಿದ್ದಾರೆ. ಅವರು ಈಗಷ್ಟೇ ವಿಧಾನಸಭಾ ಚುನಾವಣೆಯಲ್ಲಿ ಗೆದ್ದಿದ್ದು, ಜಮ್ಮು ಮತ್ತು ಕಾಶ್ಮೀರದಲ್ಲಿ ಬಿಜೆಪಿಯನ್ನು ಬಲಪಡಿಸುವಲ್ಲಿ ಗಮನಾರ್ಹ ಪಾತ್ರ ವಹಿಸಿದ್ದಾರೆ. ಈ ದುಃಖದ ಸಮಯದಲ್ಲಿ, ಅವರ ಕುಟುಂಬ ಮತ್ತು ಬೆಂಬಲಿಗರಿಗೆ ಅವರ ಅಗಲಿಕೆಯನ್ನು ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಕೇಳಿಕೊಳ್ಳುತ್ತೇನೆ. ಓಂ ಶಾಂತಿ” ಎಂದು ಪೋಸ್ಟ್ ಮಾಡಿದ್ದಾರೆ.

 

 

*****