Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಜಲಿಯನ್ ವಾಲಾಬಾಗ್ ಹುತಾತ್ಮರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಜಲಿಯನ್ ವಾಲಾಬಾಗ್ ಹುತಾತ್ಮರಿಗೆ ಗೌರವ ನಮನ ಸಲ್ಲಿಸಿದರು. “ಈ ಹುತಾತ್ಮರ ಅದಮ್ಯ ಮನೋಭಾವವನ್ನು ಮುಂದಿನ ಪೀಳಿಗೆಗಳು ಸದಾ ಸ್ಮರಿಸುತ್ತವೆ” ಎಂದು ಪ್ರಧಾನಮಂತ್ರಿಯವರು ಹೇಳಿದರು.

ಎಕ್ಸ್ ತಾಣದ ತಮ್ಮ ಖಾತೆಯಲ್ಲಿ ಪ್ರಧಾನಮಂತ್ರಿಯವರು ಈ ರೀತಿ ಸಂದೇಶವನ್ನು ಹಂಚಿಕೊಂಡಿದ್ದಾರೆ:

“ನಾವು ಇಂದು ಜಲಿಯನ್ ವಾಲಾಬಾಗ್‌ ನ ಹುತಾತ್ಮರಿಗೆ ಗೌರವ ಸಲ್ಲಿಸುತ್ತೇವೆ. ಮುಂಬರುವ ಪೀಳಿಗೆಗಳು ಅವರ ಅದಮ್ಯ ಮನೋಭಾವವನ್ನು ಯಾವಾಗಲೂ ನೆನಪಿಸಿಕೊಳ್ಳುತ್ತವೆ. ಇದು ನಿಜಕ್ಕೂ ನಮ್ಮ ರಾಷ್ಟ್ರದ ಇತಿಹಾಸದಲ್ಲಿ ಒಂದು ಕರಾಳ ಅಧ್ಯಾಯವಾಗಿದೆ. ಈ ಹುತಾತ್ಮರ ತ್ಯಾಗ, ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಪ್ರಮುಖ ತಿರುವು ನೀಡಿತ್ತು.”

 

 

*****