ಇಂದು ನಡೆದ ಜಾಫ್ನಾ ಸಾಂಸ್ಕೃತಿಕ ಕೇಂದ್ರದ ಲೋಕಾರ್ಪಣೆಯನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಒಂದು ಪ್ರಮುಖ ಉಪಕ್ರಮ ಎಂದು ಬಣ್ಣಿಸಿರುವುದಲ್ಲದೆ ಈ ಸಂದರ್ಭದಲ್ಲಿ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಅವರ ಉಪಸ್ಥಿತಿಯನ್ನು ಶ್ಲಾಘಿಸಿದ್ದಾರೆ. ಪ್ರಧಾನಮಂತ್ರಿಯವರು 2015 ರಲ್ಲಿ ಈ ಕೇಂದ್ರಕ್ಕೆ ಶಂಕುಸ್ಥಾಪನೆ ನೆರವೇರಿಸಿದ್ದಾರೆ ಮತ್ತು ಆ ವಿಶೇಷ ಭೇಟಿಯ ಕೆಲವು ಚಿತ್ರಗಳನ್ನು ಹಂಚಿಕೊಂಡಿದ್ದಾರೆ.
ಪ್ರಧಾನಮಂತ್ರಿಯವರು ಈ ಬಗ್ಗೆ ಟ್ವೀಟ್ ಮಾಡಿದ್ದಾರೆ:
“ಜಾಫ್ನಾ ಸಾಂಸ್ಕೃತಿಕ ಕೇಂದ್ರವು ಭಾರತ ಮತ್ತು ಶ್ರೀಲಂಕಾ ನಡುವಿನ ನಿಕಟ ಸಾಂಸ್ಕೃತಿಕ ಸಹಕಾರವನ್ನು ಸೂಚಿಸುವ ಪ್ರಮುಖ ಉಪಕ್ರಮವಾಗಿದೆ. ಇದು ಹಲವಾರು ಜನರಿಗೆ ಪ್ರಯೋಜನವನ್ನು ಒದಗಿಸುತ್ತದೆ. ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಅವರ ಉಪಸ್ಥಿತಿಯು ಕಾರ್ಯಕ್ರಮವನ್ನು ಇನ್ನಷ್ಟು ವಿಶೇಷಗೊಳಿಸಿತು.
2015ರಲ್ಲಿ ಜಾಫ್ನಾ ಸಾಂಸ್ಕೃತಿಕ ಕೇಂದ್ರಕ್ಕೆ ಶಂಕುಸ್ಥಾಪನೆ ನೆರವೇರಿಸುವ ಅವಕಾಶ ಒದಗಿಸಿದ್ದ ಜಾಫ್ನಾದ ನನ್ನ ವಿಶೇಷ ಭೇಟಿಯನ್ನು ನಾನೆಂದಿಗೂ ಮರೆಯಲಾರೆ. ಆ ಭೇಟಿಯ ಕೆಲವು ಇಣುಕುನೋಟಗಳು ಇಲ್ಲಿವೆ.” ಎಂದು ಅದರಲ್ಲಿ ಹೇಳಿದ್ದಾರೆ.
****
The Jaffna Cultural Center is an important initiative signifying the close cultural cooperation between India and Sri Lanka. It will benefit several people. The august presence of President Ranil Wickremesinghe made the programme even more special. @RW_UNP https://t.co/PP2xbBhMms
— Narendra Modi (@narendramodi) February 11, 2023