Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಜಾರ್ಖಂಡ್ ಸಂಸ್ಥಾಪನಾ ದಿನದ ಅಂಗವಾಗಿ ರಾಜ್ಯದ ಜನತೆಗೆ ಪ್ರಧಾನಮಂತ್ರಿ ಶುಭಾಶಯ


ಜಾರ್ಖಂಡ್‌ ಸಂಸ್ಥಾಪನಾ ದಿನದ ಅಂಗವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಆ ರಾಜ್ಯದ ಜನತೆಗೆ ಶುಭ ಹಾರೈಸಿದ್ದಾರೆ. ಹೇರಳವಾದ ನೈಸರ್ಗಿಕ ಸಂಪತ್ತನ್ನು ಹೊಂದಿರುವ ಈ ರಾಜ್ಯವು ಪ್ರಗತಿಯ ಪಥದಲ್ಲಿ ತ್ವರಿತ ಗತಿಯಲ್ಲಿ ಮುನ್ನಡೆಯಲಿ ಎಂದು ಅವರು ಹಾರೈಸಿದ್ದಾರೆ.

ಎಕ್ಸ್ ಪೋಸ್ಟ್ ನಲ್ಲಿ ಅವರು ಹೀಗೆ ಬರೆದಿದ್ದಾರೆ: 

“ಜಾರ್ಖಂಡ್‌ನ ರಾಜ್ಯ ಸಂಸ್ಥಾಪನಾ ದಿನದಂದು ನನ್ನ ಎಲ್ಲಾ ಸಹೋದರ ಸಹೋದರಿಯರಿಗೆ ಅನಂತಾನಂತ ಶುಭಾಶಯಗಳು.  ಬುಡಕಟ್ಟು ಸಮಾಜದ ಹೋರಾಟ ಮತ್ತು ತ್ಯಾಗದ ಸಿಂಚನದ ಈ ಭೂಮಿ ದೇಶಕ್ಕೆ ಸದಾ ಹೆಮ್ಮೆ ತಂದಿದೆ. ನೈಸರ್ಗಿಕ ಸಂಪನ್ಮೂಲಗಳಿಂದ ಸಮೃದ್ಧವಾಗಿರುವ ಈ ರಾಜ್ಯವು ಪ್ರಗತಿಯ ಪಥದಲ್ಲಿ ವೇಗವಾಗಿ ಮುನ್ನಡೆಯಲಿ” ಎಂಬುದು ನನ್ನ ಆಶಯ.

*****