Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಡಾ. ಎಂ.ಎಸ್. ವಲಿಯಥಾನ್ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಆರೋಗ್ಯ ಮತ್ತು ವೈದ್ಯಕೀಯ ಸಂಶೋಧನಾ ಕ್ಷೇತ್ರದ ಪ್ರವರ್ತಕ ಡಾ. ಎಂ.ಎಸ್. ವಲಿಯಥಾನ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ಈ ಸಂಬಂಧ ಪ್ರಧಾನಮಂತ್ರಿ ಅವರು ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ:

“ಆರೋಗ್ಯ ಮತ್ತು ವೈದ್ಯಕೀಯ ಸಂಶೋಧನಾ ಕ್ಷೇತ್ರದ ಪ್ರವರ್ತಕ ಡಾ.ಎಂ.ಎಸ್.ವಲಿಯಥಾನ್ ಅವರ ನಿಧನದಿಂದ ದುಃಖಿತನಾಗಿದ್ದೇನೆ. ಅವರ ಕೊಡುಗೆಗಳು ಅಳಿಸಲಾಗದ ಗುರುತನ್ನು ಬಿಟ್ಟಿವೆ ಮತ್ತು ಅಸಂಖ್ಯಾತ ಜನರಿಗೆ ಪ್ರಯೋಜನವನ್ನು ನೀಡಿವೆ. ವೆಚ್ಚ-ಪರಿಣಾಮಕಾರಿ ಮತ್ತು ಉನ್ನತ ಗುಣಮಟ್ಟದ ಆವಿಷ್ಕಾರಗಳಿಗಾಗಿ ಅವರನ್ನು ವಿಶೇಷವಾಗಿ ನೆನಪಿಸಿಕೊಳ್ಳಲಾಗುತ್ತದೆ. ಭಾರತದಲ್ಲಿ ವೈದ್ಯಕೀಯ ಶಿಕ್ಷಣ ಕ್ಷೇತ್ರವನ್ನು ಸುಧಾರಿಸುವಲ್ಲಿಯೂ ಅವರು ಮುಂಚೂಣಿಯಲ್ಲಿದ್ದರು. ನನ್ನ ಆಲೋಚನೆಗಳು ಅವರ ಕುಟುಂಬ ಮತ್ತು ಅಸಂಖ್ಯಾತ ಅಭಿಮಾನಿಗಳೊಂದಿಗೆ ಇವೆ. ಓಂ ಶಾಂತಿ,” ಎಂದು ಹೇಳಿದ್ದಾರೆ.

*****