Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಜಯಂತಿಯಂದು ಪ್ರಧಾನಮಂತ್ರಿ ಅವರಿಂದ ಗೌರವ ನಮನ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಭಾರತದ ಮಾಜಿ ರಾಷ್ಟ್ರಪತಿ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಅವರ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.

ಶ್ರೀ ನರೇಂದ್ರ ಮೋದಿ ಅವರು ಡಾ. ಕಲಾಂ ಅವರ ಸಭ್ಯ ಮನೋಭಾವ ಮತ್ತು ವೈಜ್ಞಾನಿಕ ಪ್ರತಿಭೆಯನ್ನು ಸ್ಮರಿಸಿದರು. ಡಾ. ಕಲಾಂ ಅವರು ದೇಶಕ್ಕೆ ನೀಡಿದ ಸಾಟಿಯಿಲ್ಲದ ಕೊಡುಗೆಯನ್ನು ಎಂದೆಂದಿಗೂ ಸ್ಮರಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಶ್ರೀ ನರೇಂದ್ರ ಮೋದಿ ಅವರು ಎಕ್ಸ್ ಖಾತೆಯಲ್ಲಿ ಈ ಸಂಬಂಧ ಹಂಚಿಕೊಂಡಿದ್ದಾರೆ:

“ಮಾಜಿ ರಾಷ್ಟ್ರಪತಿ ಡಾ.ಎ.ಪಿ.ಜೆ. ಅಬ್ದುಲ್ ಕಲಾಂ ಅವರ ಜನ್ಮ ದಿನಾಚರಣೆಯಂದು ನಾನು ಅವರಿಗೆ ನಮಿಸುತ್ತೇನೆ. ರಾಷ್ಟ್ರ ನಿರ್ಮಾಣಕ್ಕೆ ಅವರ ಸಾಟಿಯಿಲ್ಲದ ಕೊಡುಗೆಯನ್ನು ಸದಾ ಪೂಜ್ಯಭಾವದಿಂದ ನೆನಪಿಸಿಕೊಳ್ಳಲಾಗುತ್ತದೆ,” ಎಂದಿದ್ದಾರೆ.