Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಡಾ ರಾಮ್ ಮನೋಹರ್ ಲೋಹಿಯಾ ಅವರ ಜನ್ಮದಿನದ ಅಂಗವಾಗಿ ಪ್ರಧಾನಮಂತ್ರಿ ಗೌರವ ನಮನ


ಡಾ ರಾಮ್ ಮನೋಹರ್ ಲೋಹಿಯಾ ಅವರ ಜನ್ಮ ದಿನದಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಲೋಹಿಯಾ ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ. ಅವರನ್ನು ದೂರದೃಷ್ಟಿಯ ನಾಯಕ, ಸ್ವಾತಂತ್ರ್ಯ ಹೋರಾಟಗಾರ ಮತ್ತು ಸಾಮಾಜಿಕ ನ್ಯಾಯದ ಹರಿಕಾರ ಎಂದು ಸ್ಮರಿಸಿದ್ದಾರೆ.

ಪ್ರಧಾನಮಂತ್ರಿಗಳು ಎಕ್ಸ್ ನಲ್ಲಿ ಹೀಗೆ ಬರೆದಿದ್ದಾರೆ: 

“ಡಾ. ರಾಮ್ ಮನೋಹರ್ ಲೋಹಿಯಾ ಅವರ ಜನ್ಮ ದಿನದಂದು ಅವರ ಸ್ಮರಣೆ. ದೂರದೃಷ್ಟಿಯ ನಾಯಕ, ಉಗ್ರ ಸ್ವಾತಂತ್ರ್ಯ ಹೋರಾಟಗಾರ ಮತ್ತು ಸಾಮಾಜಿಕ ನ್ಯಾಯದ ಹರಿಕಾರರಾದ ಅವರು ಹಿಂದುಳಿದವರ ಸಬಲೀಕರಣಕ್ಕೆ ಮತ್ತು ಬಲಿಷ್ಠ ಭಾರತ ನಿರ್ಮಾಣಕ್ಕೆ ತಮ್ಮ ಜೀವನವನ್ನು ಮುಡಿಪಾಗಿಟ್ಟಿದ್ದರು.”

*****