Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಡಿಸೆಂಬರ್ 27 ರಂದು ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಫಲಾನುಭವಿಗಳೊಂದಿಗೆ ಪ್ರಧಾನ ಮಂತ್ರಿ ಸಂವಾದ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 27ನೇ ಡಿಸೆಂಬರ್, 2023 ರಂದು ಮಧ್ಯಾಹ್ನ 12:30 ಗಂಟೆಗೆ ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಫಲಾನುಭವಿಗಳೊಂದಿಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಸಂವಾದ ನಡೆಸಲಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನ ಮಂತ್ರಿಗಳು ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ದೇಶಾದ್ಯಂತ ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಸಾವಿರಾರು ಫಲಾನುಭವಿಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮದಲ್ಲಿ ಕೇಂದ್ರ ಸಚಿವರು, ಸಂಸದರು, ಶಾಸಕರು ಮತ್ತು ಸ್ಥಳೀಯ ಮಟ್ಟದ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ.

ನವೆಂಬರ್ 15, 2023 ರಂದು ಪ್ರಾರಂಭವಾದಾಗಿನಿಂದ, ಪ್ರಧಾನ ಮಂತ್ರಿಯವರು ದೇಶಾದ್ಯಂತ ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಫಲಾನುಭವಿಗಳೊಂದಿಗೆ ನಿರಂತರ ಸಂವಾದ ನಡೆಸಿದ್ದಾರೆ. ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಮೂರು ಬಾರಿ ಸಂವಾದ ನಡೆದಿದೆ (30ನೇ ನವೆಂಬರ್, 9ನೇ ಡಿಸೆಂಬರ್ ಮತ್ತು 16ನೇ ಡಿಸೆಂಬರ್). ಅಲ್ಲದೆ, ವಾರಣಾಸಿಯ ತಮ್ಮ ಇತ್ತೀಚಿನ ಭೇಟಿಯ ಸಂದರ್ಭದಲ್ಲಿ ಸತತ ಎರಡು ದಿನ (ಡಿಸೆಂಬರ್ 17-18) ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಫಲಾನುಭವಿಗಳೊಂದಿಗೆ ಪ್ರಧಾನಮಂತ್ರಿಯವರು  ಸಂವಾದ ನಡೆಸಿದರು.

ವಿಕಸಿತ ಭಾರತ ಸಂಕಲ್ಪ ಯಾತ್ರೆಯನ್ನು ದೇಶದಾದ್ಯಂತ ಕೈಗೊಳ್ಳಲಾಗುತ್ತಿದ್ದು, ಈ ಯೋಜನೆಗಳ ಪ್ರಯೋಜನಗಳು ಎಲ್ಲಾ ಉದ್ದೇಶಿತ ಫಲಾನುಭವಿಗಳಿಗೆ ಸಮಯಕ್ಕೆ ಅನುಗುಣವಾಗಿ ತಲುಪುವುದನ್ನು ಖಾತ್ರಿಪಡಿಸುವ ಮೂಲಕ ಸರ್ಕಾರದ ಪ್ರಮುಖ ಯೋಜನೆಗಳ ಯಶಸ್ಸು ಸಾಧಿಸುವ ಗುರಿಯನ್ನು ಹೊಂದಿದೆ.

*****