Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಢಾಕಾಗೆ ಪ್ರಧಾನಮಂತ್ರಿ ಆಗಮನ

ಢಾಕಾಗೆ ಪ್ರಧಾನಮಂತ್ರಿ ಆಗಮನ


PM India

ಬಾಂಗ್ಲಾದೇಶದ ಪ್ರಧಾನಮಂತ್ರಿ ಶೇಖ್ ಹಸೀನಾ ಅವರ ಆಹ್ವಾನದ ಮೇರೆಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಎರಡು ದಿನಗಳ ಬಾಂಗ್ಲಾ ಭೇಟಿಗಾಗಿ ಢಾಕಾಗೆ ಆಗಮಿಸಿದರು. ಬಾಂಗ್ಲಾದೇಶದ ಶೇಖ್ ಮುಜಿಬುರ್ ರೆಹಮಾನ್ ಅವರ ಶತಮಾನೋತ್ಸವ ಮುಜಿಬ್ ಬೋರ್ ಶೋ ಆಚರಣೆ; ಭಾರತ ಮತ್ತು ಬಾಂಗ್ಲಾದೇಶ ನಡುವಿನ ರಾಜತಾಂತ್ರಿಕ ಸಂಬಂಧ ಸ್ಥಾಪನೆಯಾಗಿ 50 ವರ್ಷ ಪೂರ್ಣ. ಬಾಂಗ್ಲಾದೇಶ ವಿಮೋಚನಾ ಯುದ್ಧ ನಡೆದು 50 ವರ್ಷ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಐತಿಹಾಸಿಕ ಭೇಟಿಯನ್ನು ಕೈಗೊಂಡಿದ್ದಾರೆ.  

ಹಜರತ್ ಶಹಜಲಾಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಪ್ರಧಾನಮಂತ್ರಿ ಶೇಖ್ ಹಸೀನಾ ಮತ್ತು ಅವರ ಸಂಪುಟ ಸಹೋದ್ಯೋಗಿಗಳು ಆತ್ಮೀಯವಾಗಿ ಸ್ವಾಗತಿಸಿದರು.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ಗೌರವ ರಕ್ಷೆ ಮತ್ತು 19 ಬಂದೂಕುಗಳಿಂದ ಗೌರವ ವಂದನೆ ಸಲ್ಲಿಸಲಾಯಿತು.

***