Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ತಮಿಳುನಾಡು ಬಸ್ ಅಪಘಾತದಲ್ಲಿ ಸಂಭವಿಸಿದ ಜೀವ ಹಾನಿಗೆ ಪ್ರಧಾನಮಂತ್ರಿ ಸಂತಾಪ ವ್ಯಕ್ತಪಡಿಸಿದ್ದಾರೆ


ತಮಿಳುನಾಡಿನ ನೀಲಗಿರಿ ಜಿಲ್ಲೆಯಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ ಆಗಿರುವ ಜೀವಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ. ಅವರ ಆಲೋಚನೆಗಳು ಮತ್ತು ಪ್ರಾರ್ಥನೆಗಳು ದುಃಖಿತ ಕುಟುಂಬಗಳೊಂದಿಗೆ ಇರುತ್ತವೆ ಎಂದು ಪ್ರಧಾನಮಂತ್ರಿಯವರು ಹೇಳಿದ್ದಾರೆ.

ಮೃತರ ಅವಲಂಬಿತ ಕುಟುಂಬಗಳಿಗೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿ ( ಪಿ.ಎಂ.ಎನ್.ಆರ್.ಎಫ್. ) ನಿಂದ ರೂ. 2 ಲಕ್ಷ ಅನುಕಂಪದ ಸಹಾಯಧನ ಹಾಗೂ  ಗಾಯಗೊಂಡವರಿಗೆ ರೂ.50,000 ಗಳನ್ನು ಪ್ರಧಾನಮಂತ್ರಿಯವರು ಘೋಷಿಸಿದ್ದಾರೆ

ಪ್ರಧಾನಮಂತ್ರಿಯವರ ಕಾರ್ಯಾಲಯ ಈ ರೀತಿ ಸಂದೇಶ ಎಕ್ಸ್ ಖಾತೆಯಲ್ಲಿ ಹಾಕಿದೆ;

“ತಮಿಳುನಾಡಿನ ನೀಲಗಿರಿ ಜಿಲ್ಲೆಯ ಕೂನೂರ್ ಬಳಿಯ ಬಸ್ ಅಪಘಾತದಲ್ಲಿ ಸಂಭವಿಸಿದ ಜೀವಹಾನಿಯಿಂದ ನೋವಾಗಿದೆ. ನನ್ನ ಆಲೋಚನೆಗಳು ದುಃಖಿತ ಕುಟುಂಬಗಳೊಂದಿಗೆ ಇವೆ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ. 

ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿ ( ಪಿ.ಎಂ.ಎನ್.ಆರ್.ಎಫ್. ) ನಿಂದ ರೂ.2 ಲಕ್ಷ ರೂಪಾಯಿಗಳ ಪರಿಹಾರವನ್ನು ಪ್ರತಿ ಮೃತರ ಅವಲಂಬಿತ ಕುಟುಂಬಗಳಿಗೆ ನೀಡಲಾಗುತ್ತದೆ. ಗಾಯಗೊಂಡವರಿಗೆ ರೂ. 50,000ಗಳನ್ನು ನೀಡಲಾಗುವುದು: ಪ್ರಧಾನಮಂತ್ರಿ @ನರೇಂದ್ರಮೋದಿ ( @narendramodi )”