Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ತಮ್ಮ ಮುಂಬರುವ ಕರ್ನಾಟಕ ಭೇಟಿಯ ಮುಖ್ಯಾಂಶಗಳನ್ನು ಹಂಚಿಕೊಂಡ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನಾಳೆ ಕರ್ನಾಟಕಕ್ಕೆ ಆಗಮಿಸಲಿದ್ದಾರೆ.

ಅವರು ಈ ರೀತಿ ಸಂದೇಶ ಟ್ವೀಟ್ ಮಾಡಿದ್ದಾರೆ:

“ನಾಳೆ, ಮಾರ್ಚ್ 12 ರಂದು ಮಂಡ್ಯ ಮತ್ತು ಹುಬ್ಬಳ್ಳಿ-ಧಾರವಾಡದಲ್ಲಿ ನಡೆಯುವ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ನಾನು ಕರ್ನಾಟಕಕ್ಕೆ ಬರುತ್ತೇನೆ. 16,000 ಕೋಟಿ ರೂಪಾಯಿಗಳ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಲಾಗುವುದು ಹಾಗೂ ಕೆಲವೊಂದು ಯೋಜನೆಗಳ ಶಂಕುಸ್ಥಾಪನೆ ಮಾಡಲಾಗುವುದು.”

https://www.pib.gov.in/PressReleseDetail.aspx?PRID=1905535 

“ನಾಳೆ, ಮಾರ್ಚ್ 12, ಮಂಡ್ಯದಿಂದ ಬೆಂಗಳೂರು-ಮೈಸೂರು ವೇಗಗತಿ ದಶಪಥ ಹೆದ್ದಾರಿ ರಾಷ್ಟ್ರಕ್ಕೆ ಸಮರ್ಪಿಸಲಾಗುವುದು. ಮೈಸೂರು-ಕುಶಾಲನಗರ ಹೆದ್ದಾರಿಗೆ ಶಂಕುಸ್ಥಾಪನೆಯೂ ಈ ಸಂದರ್ಭದಲ್ಲಿ ನಡೆಯಲಿದೆ. ಈ ಯೋಜನೆಗಳು ಪ್ರದೇಶದ ಸಂಪರ್ಕ ಮತ್ತು ಸಾಮಾಜಿಕ-ಆರ್ಥಿಕ ಬೆಳವಣಿಗೆಯನ್ನು ಹೆಚ್ಚಿಸುತ್ತವೆ.”

“ಹುಬ್ಬಳ್ಳಿ-ಧಾರವಾಡದಲ್ಲಿ ಅಭಿವೃದ್ಧಿ ಕಾರ್ಯಗಳು ವಿವಿಧ ಕ್ಷೇತ್ರಗಳನ್ನು ಒಳಗೊಂಡಿವೆ. ಐಐಟಿ ಧಾರವಾಡ ಮತ್ತು ಶ್ರೀ ಸಿದ್ಧಾರೂಢ ಸ್ವಾಮೀಜಿ ಹುಬ್ಬಳ್ಳಿ ರೈಲ್ವೇ ನಿಲ್ದಾಣದಲ್ಲಿ ವಿಶ್ವದ ಅತಿ ಉದ್ದದ ರೈಲ್ವೆ ಪ್ಲಾಟ್ಫಾರ್ಮ್ ಯೋಜನೆಗಳನ್ನು ರಾಷ್ಟ್ರಕ್ಕೆ ಸಮರ್ಪಿಸಲಾಗುವುದು. ಶುದ್ಧ ಕುಡಿಯುವ ನೀರು ಸರಬರಾಜು ಯೋಜನೆಗೆ ಶಂಕುಸ್ಥಾಪನೆ ಮಾಡಲಾಗುವುದು.” 

ಕರ್ನಾಟಕದ ಅಭಿವೃದ್ಧಿ ಯೋಜನೆಗಳ ಕುರಿತು ಸಂಸದ ಶ್ರೀ ಪ್ರತಾಪ್ ಸಿಂಹ ಮಾಡಿದ ಟ್ವೀಟ್ ಸಂದೇಶಕ್ಕೆ ಉತ್ತರಿಸಿದ ಪ್ರಧಾನಮಂತ್ರಿ ‘ನಮ್ಮ ಸರ್ಕಾರ ಸಂಪರ್ಕ ಮತ್ತು ಆರ್ಥಿಕ ಪ್ರಗತಿಯನ್ನು ಹೆಚ್ಚಿಸಲು ಕೆಲಸ ಮಾಡುತ್ತಿದೆ. ಮೈಸೂರು ಮತ್ತು ಬೆಂಗಳೂರು ನಡುವಿನ ವೇಗಗತಿ ದಶಪಥ ಹೆದ್ದಾರಿ ಆ ನಿಟ್ಟಿನಲ್ಲಿ ಒಂದು ಹೆಜ್ಜೆಯಾಗಿದೆ.

ಅವರು ಈ ರೀತಿ ಸಂದೇಶ ಟ್ವೀಟ್ ಮಾಡಿದ್ದಾರೆ:
“ನಮ್ಮ ಸರ್ಕಾರ ಸಂಪರ್ಕ ಮತ್ತು ಆರ್ಥಿಕ ಪ್ರಗತಿಗೆ ಉತ್ತೇಜನ ನೀಡುವತ್ತ ಕೆಲಸ ಮಾಡುತ್ತಿದೆ. ಮೈಸೂರು ಮತ್ತು ಬೆಂಗಳೂರು ನಡುವಿನ ಹೆದ್ದಾರಿ ಮಾರ್ಗ ಆ ದಿಕ್ಕಿನತ್ತ ಹೆಜ್ಜೆಯಾಗಿದೆ.”   

ಹೊಸಪೇಟೆ ರೈಲು ನಿಲ್ದಾಣದ ಪುನರಾಭಿವೃದ್ಧಿ ಕುರಿತು ಡಿಡಿ ನ್ಯೂಸ್ ಮಾಡಿದ ಟ್ವೀಟ್ ಸಂದೇಶಕ್ಕೆ ಸ್ಪಂದಿಸುತ್ತಾ ಉತ್ತರವಾಗಿ ಪ್ರಧಾನಮಂತ್ರಿ ಅವರು ಈ ರೀತಿ ಟ್ವೀಟ್ ಮಾಡಿದ್ದಾರೆ:

“ಹೊಸಪೇಟೆಯ ಜನತೆಗೆ ಅಭಿನಂದನೆಗಳು. ಹೆಚ್ಚುವರಿ ಸಾಂಸ್ಕೃತಿಕ ಸಂಪರ್ಕದೊಂದಿಗೆ ಸಂಪರ್ಕ ಮತ್ತು ವಾಣಿಜ್ಯಕ್ಕೆ ಉತ್ತೇಜನ.” 

ಧಾರವಾಡ ಸಂಬಂಧಿತ ಯೋಜನೆಗಳ ಕುರಿತು ಕೇಂದ್ರ ಸಚಿವ ಶ್ರೀ ಪ್ರಲ್ಹಾದ ಜೋಶಿ ಅವರ ಟ್ವೀಟ್ ಸಂದೇಶಕ್ಕೆ  ಪ್ರತಿಕ್ರಿಯೆಯಾಗಿ ಪ್ರಧಾನಮಂತ್ರಿ ಅವರು ಈ ರೀತಿ ಸಂದೇಶ ಟ್ವೀಟ್ ಮಾಡಿದ್ದಾರೆ:

“ಹುಬ್ಬಳ್ಳಿ-ಧಾರವಾಡದ ಜನರಿಗೆ ‘ಸುಗಮ ಜೀವನ’ವನ್ನು ಹೆಚ್ಚಿಸುವ ಹೊಸ ಕಾಮಗಾರಿಗಳನ್ನು ನಾಳೆ ಪ್ರಾರಂಭಿಸಲಾಗುವುದು.”

***