Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ತಿರು ಎಂ. ಜಿ. ರಾಮಚಂದ್ರನ್ ಅವರ ಜನ್ಮ ವಾರ್ಷಿಕೋತ್ಸವದಂದು ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತಿರು ಎಂ ಜಿ ರಾಮಚಂದ್ರನ್ ಅವರ ಜನ್ಮ ವಾರ್ಷಿಕೋತ್ಸವದಂದು ಅವರಿಗೆ ಗೌರವ ನಮನ ಸಲ್ಲಿಸಿದರು. “ಬಡವರನ್ನು ಸಬಲೀಕರಣಗೊಳಿಸಲು ಮತ್ತು ಉತ್ತಮ ಸಮಾಜವನ್ನು ನಿರ್ಮಿಸಲು ಅವರು ಮಾಡಿದ ಪ್ರಯತ್ನಗಳಿಂದ ನಾವು ಬಹಳ ಪ್ರೇರಿತರಾಗಿದ್ದೇವೆ” ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ.

ಪ್ರಧಾನಮಂತ್ರಿ ಅವರು “ಎಕ್ಸ್” ತಾಣದಲ್ಲಿ ಈ ರೀತಿ ಸಂದೇಶ ಹಂಚಿಕೊಂಡಿದ್ದಾರೆ:

“ತಿರು ಎಂ.ಜಿ.ಆರ್. ಅವರ ಜನ್ಮ ವಾರ್ಷಿಕೋತ್ಸವದಂದು ನಾನು ಅವರಿಗೆ ಗೌರವ ನಮನ ಸಲ್ಲಿಸುತ್ತೇನೆ. ಬಡವರನ್ನು ಸಬಲೀಕರಣಗೊಳಿಸಲು ಮತ್ತು ಉತ್ತಮ ಸಮಾಜವನ್ನು ನಿರ್ಮಿಸಲು ಅವರು ಮಾಡಿದ ಪ್ರಯತ್ನಗಳಿಂದ ನಾವು ಬಹಳಷ್ಟು ಪ್ರೇರಿತರಾಗಿದ್ದೇವೆ.”

 

 

*****