Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ತಿರು ಕೆ. ಕಾಮರಾಜ್ ಜಯಂತಿ; ಪ್ರಧಾನ ಮಂತ್ರಿ ಗೌರವ ನಮನ


ತಿರು ಕೆ. ಕಾಮರಾಜ್ ಅವರ ಜಯಂತಿ ಅಂಗವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಧೀಮಂತ ನಾಯಕನಿಗೆ ಶ್ರದ್ಧಾಂಜಲಿ ಸಲ್ಲಿಸಿದರು.

ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಅವರು:

“ತಿರು ಕೆ. ಕಾಮರಾಜ್ ಅವರ ಜಯಂತಿಯಂದು ನಾನು ಅವರಿಗೆ ಗೌರವ ನಮನ ಸಲ್ಲಿಸುತ್ತೇನೆ. ಭಾರತದ ಅಭಿವೃದ್ಧಿಗೆ ತಮ್ಮ ಸಂಪೂರ್ಣ ಜೀವನವನ್ನು ಮುಡಿಪಾಗಿಟ್ಟ ಧೀಮಂತ ವ್ಯಕ್ತಿ, ಸಾಮಾಜಿಕ ಸಬಲೀಕರಣಕ್ಕೆ ಅವರು ನೀಡಿದ್ದ ಒತ್ತು ನಮಗೆಲ್ಲರಿಗೂ ಮಾರ್ಗದರ್ಶಿ ಶಕ್ತಿಯಾಗಿದೆ. ಬಡತನ ನಿರ್ಮೂಲನೆ ಮತ್ತು ಸಾಮಾಜಿಕ ಕಲ್ಯಾಣದ ಕಡೆಗೆ ಅವರು ಹೊಂದಿದ್ದ ದೂರ ದೃಷ್ಟಿಕೋನವನ್ನು ಈಡೇರಿಸುವ ನಮ್ಮ ಬದ್ಧತೆಯನ್ನು ನಾನು ಪುನರುಚ್ಚರಿಸುತ್ತೇನೆ” ಎಂದಿದ್ದಾರೆ.

***