Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ತೆಗೆದುಕೊಂಡ ಪ್ರತಿಯೊಂದು ನಿರ್ಧಾರ, ತೆಗೆದುಕೊಳ್ಳುವ ಪ್ರತಿಯೊಂದು ಕ್ರಮವು ಜನರ ಜೀವನವನ್ನು ಸುಧಾರಿಸುವ ಉದ್ದೇಶದಿಂದ  ನಿರ್ದೇಶಿಸಲ್ಪಟ್ಟಿದೆ: ಪ್ರಧಾನ ಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಸರ್ಕಾರವು ದೇಶ ಸೇವೆಯಲ್ಲಿ 9 ವರ್ಷಗಳನ್ನು ಪೂರ್ಣಗೊಳಿಸಿರುವ ಸಂದರ್ಭದಲ್ಲಿ ನಮ್ರತೆ ವ್ಯಕ್ತಪಡಿಸಿದ್ದಾರೆ ಮತ್ತು ಕೃತಜ್ಞತೆ ಸಲ್ಲಿಸಿದ್ದಾರೆ.

ಈ ಬಗ್ಗೆ  ಪ್ರಧಾನಿ ಅವರು ಟ್ವೀಟ್ ಮಾಡಿದ್ದಾರೆ. ಅದರಲ್ಲಿ;

“ಇಂದು, ನಾವು ದೇಶದ ಸೇವೆಯಲ್ಲಿ 9 ವರ್ಷಗಳನ್ನು ಪೂರ್ಣಗೊಳಿಸುತ್ತಿರುವಾಗ, ನನ್ನಲ್ಲಿ ನಮ್ರತೆ ಮತ್ತು ಕೃತಜ್ಞತೆ ತುಂಬಿದೆ. ತೆಗೆದುಕೊಂಡ ಪ್ರತಿಯೊಂದು ನಿರ್ಧಾರ, ತೆಗೆದುಕೊಳ್ಳುವ ಪ್ರತಿಯೊಂದು ಕ್ರಮವು ಜನರ ಜೀವನವನ್ನು ಸುಧಾರಿಸುವ ಬಯಕೆಯಿಂದ ನಿರ್ದೇಶಿಸಲ್ಪಟ್ಟಿದೆ. ಅಭಿವೃದ್ಧಿ ಹೊಂದಿದ ಭಾರತವನ್ನು ನಿರ್ಮಿಸಲು ನಾವು ಇನ್ನೂ ಹೆಚ್ಚು ಶ್ರಮಿಸುತ್ತಲೇ ಇರುತ್ತೇವೆ. #9YearsOfSeva ”  ಎಂದು ಹೇಳಿದ್ದಾರೆ.

*****