Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ತೇಜಸ್ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದ ಪ್ರಧಾನಿ ಮೋದಿ

ತೇಜಸ್ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದ ಪ್ರಧಾನಿ ಮೋದಿ


ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾರತೀಯ ವಾಯುಪಡೆಯ ಯುದ್ಧ ವಿಮಾನ ತೇಜಸ್‌ನಲ್ಲಿ ಇಂದು ಯಶಸ್ವಿಯಾಗಿ ಹಾರಾಟ ಕೈಗೊಂಡರು.  

ನಂತರ ತಮ್ಮ ಅನುಭವವನ್ನು ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿರುವ ಪ್ರಧಾನ ಮಂತ್ರಿಗಳು, “ತೇಜಸ್‌ನಲ್ಲಿ ಹಾರಾಟವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಅನುಭವವು ಬಹಳ ವಿಶೇಷವಾಗಿತ್ತು. ನಮ್ಮ ದೇಶದ ಸ್ಥಳೀಯ ಸಾಮರ್ಥ್ಯಗಳಲ್ಲಿ ನನ್ನ ವಿಶ್ವಾಸ ಇನ್ನಷ್ಟು ಹೆಚ್ಚಿಸಿತು. ನಮ್ಮ ರಾಷ್ಟ್ರದ ಸಾಮರ್ಥ್ಯದ ಬಗ್ಗೆ ನನಗೆ ಒಂದು ರೀತಿಯ ಹೆಮ್ಮೆ ಮತ್ತು ಹೊಸ ಆಶಾವಾದ ನೀಡಿತು.” ಎಂದು ಬರೆದುಕೊಂಡಿದ್ದಾರೆ.