Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ದಿಲ್ಲಿಯಲ್ಲಿ ಪ್ರಧಾನಮಂತ್ರಿಯವರಿಂದ ಚಿಲಿಯ ಅಧ್ಯಕ್ಷರಾದ ಘನತೆವೆತ್ತ ಶ್ರೀ ಗೇಬ್ರಿಯಲ್ ಬೋರಿಕ್ ಫಾಂಟ್ ಅವರಿಗೆ ಆತಿಥ್ಯ

ದಿಲ್ಲಿಯಲ್ಲಿ ಪ್ರಧಾನಮಂತ್ರಿಯವರಿಂದ ಚಿಲಿಯ ಅಧ್ಯಕ್ಷರಾದ ಘನತೆವೆತ್ತ ಶ್ರೀ ಗೇಬ್ರಿಯಲ್ ಬೋರಿಕ್ ಫಾಂಟ್ ಅವರಿಗೆ ಆತಿಥ್ಯ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದಿಲ್ಲಿಯಲ್ಲಿ ಚಿಲಿ ಅಧ್ಯಕ್ಷ, ಘನತೆವೆತ್ತ ಶ್ರೀ ಗೇಬ್ರಿಯಲ್ ಬೋರಿಕ್ ಫಾಂಟ್ ಅವರನ್ನು ಆತ್ಮೀಯವಾಗಿ ಸ್ವಾಗತಿಸಿದರು, ಇದು ಭಾರತ-ಚಿಲಿ ಪಾಲುದಾರಿಕೆಯಲ್ಲಿ ಮಹತ್ವದ ಮೈಲಿಗಲ್ಲಾಗಿದೆ. ಅಧ್ಯಕ್ಷ ಬೋರಿಕ್ ಅವರಿಗೆ ಆತಿಥ್ಯ ನೀಡಲು ಸಂತಸ ವ್ಯಕ್ತಪಡಿಸಿದ ಶ್ರೀ ಮೋದಿ, ಲ್ಯಾಟಿನ್ ಅಮೆರಿಕಾದಲ್ಲಿ ಪ್ರಮುಖ ಮಿತ್ರ ರಾಷ್ಟ್ರವಾಗಿ ಚಿಲಿಯ ಮಹತ್ವವನ್ನು ಒತ್ತಿ ಹೇಳಿದರು.

ತಮ್ಮ ಮಾತುಕತೆಯ ಸಮಯದಲ್ಲಿ, ಉಭಯ ದೇಶಗಳ ನಡುವೆ ಆರ್ಥಿಕ ಸಂಪರ್ಕಗಳನ್ನು ವಿಸ್ತರಿಸುವ ಗುರಿಯನ್ನು ಹೊಂದಿರುವ ಸಮಗ್ರ ಆರ್ಥಿಕ ಪಾಲುದಾರಿಕೆ ಒಪ್ಪಂದಕ್ಕಾಗಿ ಮಾತುಕತೆಗಳನ್ನು ಪ್ರಾರಂಭಿಸಲು ಇಬ್ಬರೂ ನಾಯಕರು ಒಪ್ಪಿಕೊಂಡರು. ಖನಿಜಗಳು, ಇಂಧನ, ರಕ್ಷಣೆ, ಬಾಹ್ಯಾಕಾಶ ಮತ್ತು ಕೃಷಿಯಂತಹ ನಿರ್ಣಾಯಕ ಕ್ಷೇತ್ರಗಳನ್ನು ಸಹಯೋಗಕ್ಕೆ ಅಪಾರ ಸಾಮರ್ಥ್ಯ ಹೊಂದಿರುವ ಕ್ಷೇತ್ರಗಳು ಎಂದು ಅವರು ಗುರುತಿಸಿದರು ಮತ್ತು ಚರ್ಚಿಸಿದರು.

ಚಿಲಿಯಲ್ಲಿ ಯೋಗ ಮತ್ತು ಆಯುರ್ವೇದಕ್ಕೆ ಹೆಚ್ಚುತ್ತಿರುವ ಜನಪ್ರಿಯತೆಯು ಉಭಯ ದೇಶಗಳ ನಡುವಿನ ಸಾಂಸ್ಕೃತಿಕ ವಿನಿಮಯಕ್ಕೆ ಸಾಕ್ಷಿಯಾಗಿದೆ. ಆರೋಗ್ಯ ವಲಯವು ನಿಕಟ ಸಂಬಂಧಕ್ಕೆ ಭರವಸೆಯ ಕ್ಷೇತ್ರವಾಗಿ ಮೂಡಿ ಬಂದಿದೆ. ವಿದ್ಯಾರ್ಥಿ ವಿನಿಮಯ ಕಾರ್ಯಕ್ರಮಗಳು ಮತ್ತು ಇತರ ಉಪಕ್ರಮಗಳ ಮೂಲಕ ಸಾಂಸ್ಕೃತಿಕ ಮತ್ತು ಶೈಕ್ಷಣಿಕ ಸಂಪರ್ಕಗಳನ್ನು ಆಳಗೊಳಿಸುವ ಮಹತ್ವವನ್ನು ನಾಯಕರು ಒತ್ತಿ ಹೇಳಿದರು.

X ನಲ್ಲಿನ ಒಂದು ಥ್ರೆಡ್ ಪೋಸ್ಟ್ ನಲ್ಲಿ, ಅವರು ಹೀಗೆ ಬರೆದಿದ್ದಾರೆ:

“ಭಾರತವು ವಿಶೇಷ ಸ್ನೇಹಿತರನ್ನು ಸ್ವಾಗತಿಸುತ್ತದೆ!

ಅಧ್ಯಕ್ಷರಾದ ಗೇಬ್ರಿಯಲ್ ಬೋರಿಕ್ ಫಾಂಟ್ ಅವರಿಗೆ ದಿಲ್ಲಿಯಲ್ಲಿ ಆತಿಥ್ಯ ನೀಡಿ ಸ್ವಾಗತಿಸುತ್ತಿರುವುದು ಸಂತೋಷದ ಸಂಗತಿ. ಲ್ಯಾಟಿನ್ ಅಮೆರಿಕಾದಲ್ಲಿ ಚಿಲಿ ನಮ್ಮ ಪ್ರಮುಖ ಸ್ನೇಹಿತ. ಇಂದಿನ ನಮ್ಮ ಮಾತುಕತೆ ಭಾರತ-ಚಿಲಿ ದ್ವಿಪಕ್ಷೀಯ ಸ್ನೇಹಕ್ಕೆ ಮಹತ್ವದ ಉತ್ತೇಜನ ನೀಡಲಿದೆ.

@GabrielBoric”

“ಚಿಲಿಯೊಂದಿಗೆ ಆರ್ಥಿಕ ಸಂಪರ್ಕವನ್ನು ವಿಸ್ತರಿಸಲು ನಾವು ಉತ್ಸುಕರಾಗಿದ್ದೇವೆ. ಈ ನಿಟ್ಟಿನಲ್ಲಿ, ಅಧ್ಯಕ್ಷ ಗೇಬ್ರಿಯಲ್ ಬೋರಿಕ್ ಫಾಂಟ್ ಮತ್ತು ನಾನು ಸಮಗ್ರ ಆರ್ಥಿಕ ಪಾಲುದಾರಿಕೆ ಒಪ್ಪಂದಕ್ಕಾಗಿ ಚರ್ಚೆಗಳು ಪ್ರಾರಂಭವಾಗಬೇಕು ಎಂದು ಒಪ್ಪಿಕೊಂಡಿದ್ದೇವೆ. ನಿರ್ಣಾಯಕ ಖನಿಜಗಳು, ಇಂಧನ, ರಕ್ಷಣೆ, ಬಾಹ್ಯಾಕಾಶ ಮತ್ತು ಕೃಷಿಯಂತಹ ಕ್ಷೇತ್ರಗಳ ಬಗ್ಗೆಯೂ ನಾವು ಚರ್ಚಿಸಿದ್ದೇವೆ.

“ವಿಶೇಷವಾಗಿ ಆರೋಗ್ಯ ರಕ್ಷಣೆಯು ಭಾರತ ಮತ್ತು ಚಿಲಿಯನ್ನು ಇನ್ನಷ್ಟು ಹತ್ತಿರ ತರುವ ಹೆಚ್ಚಿನ ಸಾಮರ್ಥ್ಯವನ್ನು ಹೊಂದಿದೆ. ಚಿಲಿಯಲ್ಲಿ ಯೋಗ ಮತ್ತು ಆಯುರ್ವೇದದ ಬಗ್ಗೆ ಹೆಚ್ಚುತ್ತಿರುವ ಜನಪ್ರಿಯತೆ ಸಂತೋಷದ ಸಂಗತಿಯಾಗಿದೆ. ಸಾಂಸ್ಕೃತಿಕ ಮತ್ತು ವಿದ್ಯಾರ್ಥಿ ವಿನಿಮಯ ಕಾರ್ಯಕ್ರಮಗಳ ಮೂಲಕ ನಮ್ಮ ರಾಷ್ಟ್ರಗಳ ನಡುವೆ ಸಾಂಸ್ಕೃತಿಕ ಸಂಪರ್ಕಗಳನ್ನು ಆಳಗೊಳಿಸುವುದೂ ಅಷ್ಟೇ ನಿರ್ಣಾಯಕವಾಗಿದೆ”.

 

 

*****