Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ದುಬೈ 2024 ನಡೆದ  ವಿಶ್ವ ಸರ್ಕಾರಗಳ ಶೃಂಗಸಭೆಯ ಸಂದರ್ಭದಲ್ಲಿ ಮಡಗಾಸ್ಕರ್ ಗಣರಾಜ್ಯದ ಅಧ್ಯಕ್ಷರನ್ನು ಭೇಟಿಯಾದ ಪ್ರಧಾನಮಂತ್ರಿ

ದುಬೈ 2024 ನಡೆದ  ವಿಶ್ವ ಸರ್ಕಾರಗಳ ಶೃಂಗಸಭೆಯ ಸಂದರ್ಭದಲ್ಲಿ ಮಡಗಾಸ್ಕರ್ ಗಣರಾಜ್ಯದ ಅಧ್ಯಕ್ಷರನ್ನು ಭೇಟಿಯಾದ ಪ್ರಧಾನಮಂತ್ರಿ


ದುಬೈನಲ್ಲಿ ಜರುಗಿದ ವಿಶ್ವ ಸರ್ಕಾರಗಳ ಶೃಂಗಸಭೆಯ ಸಂದರ್ಭದಲ್ಲಿ ಮಡಗಾಸ್ಕರ್ ಅಧ್ಯಕ್ಷ ಶ್ರೀ ಆಂಡ್ರಿ ರಾಜೋಲಿನಾ ಅವರನ್ನು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭೇಟಿ ಮಾಡಿದರು. ಉಭಯ ನಾಯಕರ ನಡುವಿನ ಮೊದಲ ಭೇಟಿ ಇದಾಗಿದೆ.

ಇಬ್ಬರೂ ನಾಯಕರು ಉಭಯ ದೇಶಗಳ ನಡುವಿನ ದೀರ್ಘಕಾಲದ ಸ್ನೇಹ ಸಂಬಂಧಗಳು ಮತ್ತು ಪ್ರಾಚೀನ ಭೌಗೋಳಿಕ ಸಂಬಂಧಗಳನ್ನು ಪರಸ್ಪರ ಮತ್ತೊಮ್ಮೆ ಪರಿಚಯಿಸಿಕೊಂಡಿದ್ದಾರೆ.  ದ್ವಿಪಕ್ಷೀಯ ಸಂಬಂಧಗಳನ್ನು ಮುನ್ನಡೆಸುವ ಮಾರ್ಗಗಳನ್ನು ಇಬ್ಬರೂ ನಾಯಕರು ಚರ್ಚಿಸಿದರು. ವಿಶ್ವಸಂಸ್ಥೆ  ಸೇರಿದಂತೆ ವಿವಿಧ ಬಹುಪಕ್ಷೀಯ ವೇದಿಕೆಗಳಲ್ಲಿ ಉಭಯ ದೇಶಗಳ ನಡುವಿನ ನಿಕಟ ಸಹಕಾರವನ್ನು ಇಬ್ಬರೂ ನಾಯಕರು ಶ್ಲಾಘಿಸಿದರು.

ಭಾರತ-ಮಡಗಾಸ್ಕರ್ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸಲು ಮತ್ತು ವಿಷನ್ ಸಾಗರ್ – ಪ್ರದೇಶದಲ್ಲಿ ಎಲ್ಲರಿಗೂ ಭದ್ರತೆ ಮತ್ತು ಬೆಳವಣಿಗೆಗೆ ಭಾರತದ ಬದ್ಧತೆಯನ್ನು ಪ್ರಧಾನಮಂತ್ರಿಯವರು  ಈ ಸಂದರ್ಭದಲ್ಲಿ ಪುನರುಚ್ಚರಿಸಿದರು. ಹಿಂದೂ ಮಹಾಸಾಗರ ಪ್ರದೇಶದಲ್ಲಿ ಅಭಿವೃದ್ಧಿಶೀಲ ರಾಷ್ಟ್ರವಾಗಿ ಭಾರತವು, ಮಡಗಾಸ್ಕರ್ನ ಅಭಿವೃದ್ಧಿಯ ಪಯಣದಲ್ಲಿ ಬದ್ಧ ಪಾಲುದಾರನಾಗಿ ಉಳಿಯುತ್ತದೆ ಎಂದು ಪ್ರಧಾನಮಂತ್ರಿಯವರು  ಮಡಗಾಸ್ಕರ್ ಗಣರಾಜ್ಯದ ಅಧ್ಯಕ್ಷರಿಗೆ ತಿಳಿಸಿದರು.

****