Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ದೇಶದ ಮೊದಲ ರಾಷ್ಟ್ರಪತಿ, ಭಾರತ ರತ್ನ ಡಾ. ರಾಜೇಂದ್ರ ಪ್ರಸಾದ್ ಅವರ ಜನ್ಮ ಜಯಂತಿಯಂದು ಪ್ರಧಾನಮಂತ್ರಿ ಅವರಿಂದ ಗೌರವ ನಮನ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದೇಶದ ಮೊದಲ ರಾಷ್ಟ್ರಪತಿ, ಭಾರತ ರತ್ನ ಡಾ. ರಾಜೇಂದ್ರ ಪ್ರಸಾದ್ ಅವರ ಜನ್ಮ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದರು. ಭಾರತೀಯ ಪ್ರಜಾಪ್ರಭುತ್ವಕ್ಕೆ ಬಲವಾದ ಅಡಿಪಾಯ ಹಾಕುವಲ್ಲಿ ಡಾ. ರಾಜೇಂದ್ರ ಪ್ರಸಾದ್ ಅವರ ಅಮೂಲ್ಯ ಕೊಡುಗೆಯನ್ನು ಅವರು ಶ್ಲಾಘಿಸಿದರು.

ಈ ಸಂಬಂಧ ಎಕ್ಸ್ ಖಾತೆಯಲ್ಲಿ ಶ್ರೀ ನರೇಂದ್ರ ಮೋದಿ ಹೀಗೆ ಬರೆದಿದ್ದಾರೆ:

“ಭಾರತದ ಮೊದಲ ರಾಷ್ಟ್ರಪತಿ, ಭಾರತ ರತ್ನ ಡಾ.ರಾಜೇಂದ್ರ ಪ್ರಸಾದ್ ಅವರ ಜನ್ಮ ದಿನಾಚರಣೆಯಂದು ಅವರಿಗೆ ಗೌರವ ನಮನಗಳು. ಸಂವಿಧಾನ ಸಭೆಯ ಅಧ್ಯಕ್ಷರಾಗಿ, ಅವರು ಭಾರತೀಯ ಪ್ರಜಾಪ್ರಭುತ್ವದ ಬಲವಾದ ಅಡಿಪಾಯವನ್ನು ಹಾಕುವಲ್ಲಿ ಅಮೂಲ್ಯ ಕೊಡುಗೆ ನೀಡಿದ್ದಾರೆ. ಇಂದು, ನಾವೆಲ್ಲರೂ ಸಂವಿಧಾನದ 75ನೇ ವರ್ಷವನ್ನು ಆಚರಿಸುತ್ತಿರುವಾಗ, ಅವರ ಜೀವನ ಮತ್ತು ಆದರ್ಶಗಳು ಇನ್ನಷ್ಟು ಸ್ಪೂರ್ತಿದಾಯಕವಾಗಿವೆ,” ಎಂದಿದ್ದಾರೆ.

 

 

*****