Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ನವದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತದ ಘಟನೆಯಿಂದ ಸಂಭವಿಸಿದ ಜೀವಹಾನಿಗಳಿಗೆ ಪ್ರಧಾನಮಂತ್ರಿ ಸಂತಾಪ 


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತದಿಂದ ಪ್ರಾಣ ಕಳೆದುಕೊಂಡವರಿಗೆ ಸಂತಾಪ ಸೂಚಿಸಿದ್ದಾರೆ.  ಮತ್ತು, ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.

ಎಕ್ಸ್ ತಾಣದಲ್ಲಿ, ಪ್ರಧಾನಮಂತ್ರಿ ಅವರು ಈ ರೀತಿ ಸಂದೇಶ ತಿಳಿಸಿದ್ದಾರೆ;

“ನವದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತದಿಂದ ತೊಂದರೆಗೀಡಾದ ಘಟನೆ ಸಂಭವಿಸಿದೆ. ಈ ಸಂದರ್ಭದಲ್ಲಿ , ನನ್ನ ಆಲೋಚನೆಗಳು ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಎಲ್ಲರೊಂದಿಗೆ ಇವೆ.  ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ.  ಈ ಕಾಲ್ತುಳಿತದಿಂದ ಹಾನಿಗೊಳಗಾದ ಎಲ್ಲರಿಗೂ ಅಧಿಕಾರಿಗಳು ಸಹಾಯ ಮಾಡುತ್ತಾರೆ.”

 

 

*****