Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ನವೆಂಬರ್ 26 ರಂದು ನಡೆಯುವ ಸಂವಿಧಾನ ದಿನಾಚರಣೆಯಲ್ಲಿ ಭಾಗವಹಿಸಲಿರುವ ಪ್ರಧಾನಮಂತ್ರಿ


ಭಾರತದ ಸಂವಿಧಾನ ಅಂಗೀಕರಿಸಿ 75 ವರ್ಷಗಳು ಪೂರ್ಣಗೊಂಡಿರುವ ಮಹತ್ವದ ಸಂದರ್ಭದಲ್ಲಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವೆಂಬರ್ 26ರಂದು ಸುಪ್ರೀಂ ಕೋರ್ಟ್‌ನ ಆಡಳಿತಾತ್ಮಕ ಕಟ್ಟಡ ಸಂಕೀರ್ಣ ಸಭಾಂಗಣದಲ್ಲಿ ಸಂಜೆ 5 ಗಂಟೆಗೆ ಆಯೋಜಿಸಿರುವ ಸಂವಿಧಾನ ದಿನಾಚರಣೆಯಲ್ಲಿ ಭಾಗವಹಿಸಲಿದ್ದಾರೆ. ಅವರು ಭಾರತೀಯ ನ್ಯಾಯಾಂಗದ(2023-24) ವಾರ್ಷಿಕ ವರದಿ ಬಿಡುಗಡೆ ಮಾಡಲಿದ್ದಾರೆ. ಇದೇ ಸಂದರ್ಭದಲ್ಲಿ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಲಿದ್ದಾರೆ.

ಭಾರತದ ಸುಪ್ರೀಂ ಕೋರ್ಟ್ ಕಾರ್ಯಕ್ರಮ ಆಯೋಜಿಸುತ್ತಿದೆ. ಭಾರತದ ಮುಖ್ಯ ನ್ಯಾಯಮೂರ್ತಿಗಳು ಮತ್ತು ಸುಪ್ರೀಂ ಕೋರ್ಟ್‌ನ ಇತರೆ ನ್ಯಾಯಾಧೀಶರು ಸಹ ಕಾರ್ಯಕ್ರಮದಲ್ಲಿ ಉಪಸ್ಥಿತರಿರುತ್ತಾರೆ.

 

*****