Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ನಾಗರಿಕ ವಿಮಾನಯಾನ ಕ್ಷೇತ್ರ ಕುರಿತು ಪ್ರಧಾನಿ ಮೋದಿಯವರಿಂದ ಪರಿಶೀಲನಾ ಸಭೆ


ಭಾರತದ ನಾಗರಿಕ ವಿಮಾನಯಾನ ಕ್ಷೇತ್ರವನ್ನು ಹೆಚ್ಚು ಪರಿಣಾಮಕಾರಿಯಾಗಿ ಮಾಡಲು ಸಹಾಯ ಮಾಡುವ ಕಾರ್ಯತಂತ್ರಗಳನ್ನು ಪರಿಶೀಲಿಸಲು ಪ್ರಧಾನಿ ನರೇಂದ್ರ ಮೋದಿಯವರು ಸಮಗ್ರ ಸಭೆ ನಡೆಸಿದರು. ಪ್ರಯಾಣಿಕರಿಗೆ ಅನುಕೂಲವಾಗುವಂತೆ ಮತ್ತು ವಿಮಾನಯಾನ ಸಂಸ್ಥೆಗಳಿಗೆ ವೆಚ್ಚವನ್ನು ಕಡಿಮೆ ಮಾಡಲು ಹಾರಾಟದ ಸಮಯವನ್ನು ಕಡಿಮೆ ಮಾಡುವ ಕುರಿತು ಮಿಲಿಟರಿ ವ್ಯವಹಾರಗಳ ಇಲಾಖೆಯ ಸಹಕಾರದೊಂದಿಗೆ ಭಾರತೀಯ ವಾಯು ಪ್ರದೇಶವನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಬೇಕೆಂದು ನಿರ್ಧರಿಸಲಾಯಿತು.

ಹೆಚ್ಚಿನ ಆದಾಯವನ್ನು ಗಳಿಸಲು ಮತ್ತು ವಿಮಾನ ನಿಲ್ದಾಣಗಳಲ್ಲಿ ಹೆಚ್ಚಿನ ದಕ್ಷತೆಯನ್ನು ತರಲು, ಮೂರು ತಿಂಗಳಲ್ಲಿ ಟೆಂಡರ್ ಪ್ರಕ್ರಿಯೆಯನ್ನು ಪ್ರಾರಂಭಿಸುವ ಮೂಲಕ ಪಿಪಿಪಿ ಆಧಾರದ ಮೇಲೆ ಇನ್ನೂ 6 ವಿಮಾನ ನಿಲ್ದಾಣಗಳನ್ನು ಹಸ್ತಾಂತರಿಸುವ ಪ್ರಕ್ರಿಯೆಯನ್ನು ತ್ವರಿತಗೊಳಿಸಲು ನಾಗರಿಕ ವಿಮಾನಯಾನ ಸಚಿವಾಲಯಕ್ಕೆ ಸೂಚಿಸಲಾಯಿತು.

ಇ-ಡಿಜಿಸಿಎ ಯೋಜನೆಯನ್ನೂ ಪರಿಶೀಲಿಸಲಾಯಿತು. ಈ ಯೋಜನೆಯು ಡಿಜಿಸಿಎ ಕಚೇರಿಯಲ್ಲಿ ಹೆಚ್ಚು ಪಾರದರ್ಶಕತೆಯನ್ನು ತರುತ್ತದೆ ಮತ್ತು ವಿವಿಧ ಪರವಾನಗಿಗಳು / ಅನುಮತಿಗಳ ಪ್ರಕ್ರಿಯೆಯ ಸಮಯವನ್ನು ಕಡಿಮೆ ಮಾಡುವ ಮೂಲಕ ಎಲ್ಲಾ ಪಾಲುದಾರಿಗೆ ನೆರವಾಗುತ್ತದೆ.

ನಾಗರಿಕ ವಿಮಾನಯಾನ ಸಚಿವಾಲಯ ಮತ್ತು ಅದರ ಅಡಿಯಲ್ಲಿರುವ ಸಂಸ್ಥೆಗಳು ಕೈಗೊಂಡ ಎಲ್ಲಾ ಸುಧಾರಣಾ ಉಪಕ್ರಮಗಳು ನಿಗದಿತ ಸಮಯಕ್ಕೆ ತಕ್ಕಂತೆ ಮುಂದುವರಿಯಬೇಕು ಎಂದು ನಿರ್ಧರಿಸಲಾಯಿತು

ಸಭೆಯಲ್ಲಿ ಗೃಹ ಸಚಿವರು, ಹಣಕಾಸು ಸಚಿವರು, ನಾಗರಿಕ ವಿಮಾನಯಾನ ಖಾತೆ ರಾಜ್ಯ ಸಚಿವರು, ಹಣಕಾಸು ಖಾತೆ ರಾಜ್ಯ ಸಚಿವರು ಮತ್ತು ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.