Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ನಾಗ್ಪುರ ರೈಲ್ವೆ ನಿಲ್ದಾಣದಿಂದ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ಪ್ರಧಾನಮಂತ್ರಿ ಹಸಿರು ನಿಶಾನೆ

ನಾಗ್ಪುರ ರೈಲ್ವೆ ನಿಲ್ದಾಣದಿಂದ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ಪ್ರಧಾನಮಂತ್ರಿ ಹಸಿರು ನಿಶಾನೆ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನಾಗ್ಪುರ ರೈಲ್ವೆ ನಿಲ್ದಾಣದ ಪ್ಲಾಟ್ ಫಾರ್ಮ್ ನಂ.1 ರಿಂದ ನಾಗ್ಪುರ ಮತ್ತು ಬಿಲಾಸ್ ಪುರವನ್ನು ಸಂಪರ್ಕಿಸುವ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ಹಸಿರು ನಿಶಾನೆ ತೋರಿದರು.

ಪ್ರಧಾನಮಂತ್ರಿ ಅವರು ವಂದೇ ಭಾರತ್ ಎಕ್ಸ್ ಪ್ರೆಸ್ ನ ರೈಲು ಬೋಗಿಗಳನ್ನು ಪರಿಶೀಲಿಸಿದರು ಮತ್ತು ಆನ್ ಬೋರ್ಡ್ ಸೌಲಭ್ಯಗಳ ಬಗ್ಗೆ ಮಾಹಿತಿ ಪಡೆದರು. ಶ್ರೀ ನರೇಂದ್ರ ಮೋದಿ ಅವರು ವಂದೇ ಭಾರತ್ ಎಕ್ಸ್ ಪ್ರೆಸ್ ನ ಲೋಕೋಮೋಟಿವ್ ಎಂಜಿನ್ ನ ನಿಯಂತ್ರಣ ಕೇಂದ್ರವನ್ನು ಪರಿಶೀಲಿಸಿದರು ಮತ್ತು ನಾಗ್ಪುರ ಮತ್ತು ಅಜ್ನಿ ರೈಲ್ವೆ ನಿಲ್ದಾಣಗಳ ಅಭಿವೃದ್ಧಿ ಯೋಜನೆಗಳನ್ನು ಪರಿಶೀಲಿಸಿದರು. ನಾಗ್ಪುರದಿಂದ ಬಿಲಾಸ್ ಪುರಕ್ಕೆ ಪ್ರಯಾಣದ ಸಮಯವನ್ನು 7-8 ಗಂಟೆಗಳಿಂದ 5 ಗಂಟೆ 30 ನಿಮಿಷಗಳಿಗೆ ಇದು ಇಳಿಸಲಿದೆ.

ಈ ಸಂಬಂಧ ಪ್ರಧಾನಮಂತ್ರಿ ಅವರು ಟ್ವೀಟ್ ಮಾಡಿದ್ದಾರೆ:

” ನಾಗ್ಪುರ ಮತ್ತು ಬಿಲಾಸ್ ಪುರ ನಡುವಿನ ವಂದೇ ಭಾರತ್ ಎಕ್ಸ್ ಪ್ರೆಸ್ ಗೆ ಹಸಿರು ನಿಶಾನೆ ತೋರಲಾಗಿದೆ. ಈ ರೈಲಿನಿಂದ ಸಂಪರ್ಕವನ್ನು ಗಮನಾರ್ಹವಾಗಿ ಹೆಚ್ಚಿಸಲಾಗುವುದು ” ಎಂದು ಅವರು ಹೇಳಿದರು.

ಪ್ರಧಾನಮಂತ್ರಿ ಅವರೊಂದಿಗೆ ಮಹಾರಾಷ್ಟ್ರದ ಮುಖ್ಯಮಂತ್ರಿ ಶ್ರೀ ಏಕನಾಥ್ ಶಿಂಧೆ, ಮಹಾರಾಷ್ಟ್ರ ರಾಜ್ಯಪಾಲ ಶ್ರೀ ಭಗತ್ ಸಿಂಗ್ ಕೋಶ್ಯಾರಿ, ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಶ್ರೀ ದೇವೇಂದ್ರ ಫಡ್ನವೀಸ್ ಮತ್ತು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ಶ್ರೀ ನಿತಿನ್ ಗಡ್ಕರಿ ಅವರು ನಾಗ್ಪುರ ರೈಲ್ವೆ ನಿಲ್ದಾಣಕ್ಕೆ ಆಗಮಿಸಿದಾಗ ಅವರ ಜತೆಗಿದ್ದರು.

ಹಿನ್ನೆಲೆ

ರೈಲಿನ ಪರಿಚಯದಿಂದ ಈ ಪ್ರದೇಶದಲ್ಲಿ ಪ್ರವಾಸೋದ್ಯಮವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ ಮತ್ತು ಆರಾಮದಾಯಕ ಮತ್ತು ವೇಗದ ಪ್ರಯಾಣದ ವಿಧಾನವನ್ನು ಕಲ್ಪಿಸುತ್ತದೆ. ನಾಗ್ಪುರದಿಂದ ಬಿಲಾಸ್ ಪುರಕ್ಕೆ ಪ್ರಯಾಣದ ಸಮಯ 5 ಗಂಟೆ 30 ನಿಮಿಷಗಳಾಗಿದೆ. ಇದು ದೇಶದಲ್ಲಿ ಪರಿಚಯಿಸಲಾದ ಆರನೇ ವಂದೇ ಭಾರತ್ ರೈಲು ಮತ್ತು ಹಿಂದಿನದಕ್ಕೆ ಹೋಲಿಸಿದರೆ ಸುಧಾರಿತ ಆವೃತ್ತಿಯಾಗಿದ್ದು, ಇದು ಹೆಚ್ಚು ಹಗುರವಾಗಿದೆ ಮತ್ತು ಕಡಿಮೆ ಅವಧಿಯಲ್ಲಿ ಹೆಚ್ಚಿನ ವೇಗವನ್ನು ತಲುಪುವ ಸಾಮರ್ಥ್ಯವನ್ನು ಹೊಂದಿದೆ. ವಂದೇ ಭಾರತ್ 2.0 ಕೇವಲ 52 ಸೆಕೆಂಡುಗಳಲ್ಲಿ ಗಂಟೆಗೆ 0 ರಿಂದ 100 ಕಿಲೋಮೀಟರ್ ವೇಗವನ್ನು ತಲುಪುವ ಮತ್ತು ಗಂಟೆಗೆ ಗರಿಷ್ಠ 180 ಕಿಲೋಮೀಟರ್ ವೇಗವನ್ನು ತಲುಪುವಂತಹ ಹೆಚ್ಚಿನ ಪ್ರಗತಿಗಳು ಮತ್ತು ಸುಧಾರಿತ ವೈಶಿಷ್ಟ್ಯಗಳನ್ನು ಹೊಂದಿದೆ. ಸುಧಾರಿತ ವಂದೇ ಭಾರತ್ ಎಕ್ಸ್ ಪ್ರೆಸ್ ಹಿಂದಿನ 430 ಟನ್ ಗಳಿಗೆ ಹೋಲಿಸಿದರೆ 392 ಟನ್ ತೂಕವನ್ನು ಹೊಂದಿದೆ. ಇದು ವೈ-ಫೈ ಕಂಟೆಂಟ್ ಆನ್-ಡಿಮ್ಯಾಂಡ್ ಸೌಲಭ್ಯವನ್ನು ಸಹ ಒಳಗೊಂಡಿದೆ. ಪ್ರತಿ ಬೋಗಿಯು ಪ್ರಯಾಣಿಕರ ಮಾಹಿತಿ ಮತ್ತು ಮಾಹಿತಿಗಳನ್ನು ಒದಗಿಸುವ 32 ” ಟಿವಿ ಪರದೆಗಳನ್ನು ಹೊಂದಿದೆ. ಇದು  ಹಿಂದಿನ ಆವೃತ್ತಿಯಲ್ಲಿ 24 ” ಕ್ಕೆ ಹೋಲಿಸಿದರೆ ದೊಡ್ಡದಾಗಿದೆ. ವಂದೇ ಭಾರತ್ ಎಕ್ಸ್ ಪ್ರೆಸ್ ಕೂಡ ಪರಿಸರ ಸ್ನೇಹಿಯಾಗಿರಲಿದ್ದು, ಎಸಿಗಳು ಶೇಕಡಾ 15 ರಷ್ಟು ಹೆಚ್ಚು ಇಂಧನ ದಕ್ಷತೆಯನ್ನು ಹೊಂದಿರುತ್ತವೆ. ಎಳೆತದ ಮೋಟರ್ ನ ಧೂಳು ಮುಕ್ತ ಸ್ವಚ್ಛವಾದ ಗಾಳಿಯ ತಂಪಾಗಿಸುವಿಕೆಯೊಂದಿಗೆ, ಪ್ರಯಾಣವು ಹೆಚ್ಚು ಆರಾಮದಾಯಕವಾಗಿರುತ್ತದೆ. ಈ ಹಿಂದೆ ಎಕ್ಸಿಕ್ಯೂಟಿವ್ ಕ್ಲಾಸ್ ಪ್ರಯಾಣಿಕರಿಗೆ ಮಾತ್ರ ಒದಗಿಸಲಾದ ಸೈಡ್ ರೆಕ್ಲೈನರ್ ಸೀಟ್ ಸೌಲಭ್ಯವನ್ನು ಈಗ ಎಲ್ಲಾ ತರಗತಿಗಳಿಗೆ ಲಭ್ಯವಾಗುವಂತೆ ಮಾಡಲಾಗಿದೆ. ಎಕ್ಸಿಕ್ಯೂಟಿವ್ ಬೋಗಿಗಳು 180 ಡಿಗ್ರಿ ತಿರುಗುವ ಆಸನಗಳ ಹೆಚ್ಚುವರಿ ವೈಶಿಷ್ಟ್ಯವನ್ನು ಹೊಂದಿವೆ.

ವಂದೇ ಭಾರತ್ ಎಕ್ಸ್ ಪ್ರೆಸ್  ಹೊಸ ವಿನ್ಯಾಸದಲ್ಲಿ, ವಾಯು ಶುದ್ಧೀಕರಣಕ್ಕಾಗಿ ರೂಫ್-ಮೌಂಟೆಡ್ ಪ್ಯಾಕೇಜ್ ಯೂನಿಟ್ (ಆರ್ ಎಂಪಿಯು) ನಲ್ಲಿ ಫೋಟೋ – ವೇಗವರ್ಧಕ ನೇರಳಾತೀತ ವಾಯು ಶುದ್ಧೀಕರಣ ವ್ಯವಸ್ಥೆಯನ್ನು ಅಳವಡಿಸಿಕೊಂಡಿದೆ. ಚಂಡೀಗಢದ ಸೆಂಟ್ರಲ್ ಸೈಂಟಿಫಿಕ್ ಇನ್ ಸ್ಟ್ರು  ಮೆಂಟ್ಸ್ ಆರ್ಗನೈಸೇಷನ್ (ಸಿಎಸ್ಐಒ) ಶಿಫಾರಸು ಮಾಡಿದಂತೆ, ತಾಜಾ ಗಾಳಿ ಮತ್ತು ಹಿಂತಿರುಗುವ ಗಾಳಿಯ ಮೂಲಕ ಬರುವ ಸೂಕ್ಷ್ಮಜೀವಿಗಳು, ಬ್ಯಾಕ್ಟೀರಿಯಾ, ವೈರಸ್‌ಗಳು ಇತ್ಯಾದಿಗಳಿಂದ ಮುಕ್ತವಾದ ಗಾಳಿಯನ್ನು ಫಿಲ್ಟರ್ ಮಾಡಲು ಮತ್ತು ಸ್ವಚ್ಛಗೊಳಿಸಲು ಆರ್ ಎಂಪಿಯು ನ ಎರಡೂ ತುದಿಗಳಲ್ಲಿ ಈ ವ್ಯವಸ್ಥೆಯನ್ನು ವಿನ್ಯಾಸಗೊಳಿಸಲಾಗಿದೆ ಮತ್ತು ಅಳವಡಿಸಲಿದೆ.

ವಂದೇ ಭಾರತ್ ಎಕ್ಸ್ ಪ್ರೆಸ್ 2.0 ವಿವಿಧ ಉತ್ಕೃಷ್ಟ ಮತ್ತು ವಿಮಾನದಂತಹ ಪ್ರಯಾಣದ ಅನುಭವಗಳನ್ನು ನೀಡುತ್ತದೆ. ಇದು ದೇಶೀಯವಾಗಿ ಅಭಿವೃದ್ಧಿಪಡಿಸಿದ ಟ್ರೈನ್ ಕೊಲಿಷನ್ ಅವಾಯ್ಡನ್ಸ್ ಸಿಸ್ಟಮ್ (ರೈಲು ಘರ್ಷಣೆ ತಪ್ಪಿಸುವ ವ್ಯವಸ್ಥೆ) – ಕಾವಾಚ್ ಸೇರಿದಂತೆ ಸುಧಾರಿತ ಅತ್ಯಾಧುನಿಕ ಸುರಕ್ಷತಾ ವೈಶಿಷ್ಟ್ಯಗಳನ್ನು ಹೊಂದಿದೆ.

*****