Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ನೇತಾಜಿ ಸುಭಾಶ್ ಚಂದ್ರ ಬೋಸ್ ಅವರ ಜಯಂತಿಯಂದು ಪ್ರಧಾನಮಂತ್ರಿ ಅವರಿಂದ ಗೌರವ ನಮನ


ನೇತಾಜಿ ಸುಭಾಶ್ ಚಂದ್ರ ಬೋಸ್ ಅವರ ಜಯಂತಿಯಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವ ನಮನ ಸಲ್ಲಿಸಿದರು.

“ನೇತಾಜಿ ಸುಭಾಶ್ ಚಂದ್ರ ಬೋಸ್ ಅವರ ಜಯಂತಿಯಂದು ನಾನು ಅವರಿಗೆ ಗೌರವ ನಮನ ಸಲ್ಲಿಸುತ್ತಿದ್ದೇನೆ. ಇವರು ಭಾರತವನ್ನು ಸ್ವತಂತ್ರಗೊಳಿಸುವಲ್ಲಿ ತಮ್ಮನ್ನು ತಾವು ಬದ್ಧರನ್ನಾಗಿಸಿಕೊಂಡ ಅಗ್ರಗಣ್ಯ ನಾಯಕರಾಗಿದ್ದರು. ಅವರದು ಘನತೆಯ ಜೀವನವಾಗಿತ್ತು. ಅವರ ಆದರ್ಶಗಳನ್ನು ಪೂರ್ಣಗೊಳಿಸುವಲ್ಲಿ ಹಾಗೂ ಬಲಿಷ್ಠ ಭಾರತ ನಿರ್ಮಾಣಕ್ಕೆ ನಾವು ಬದ್ಧರಾಗಿದ್ದೇವೆ.” ಎಂದು ಪ್ರಧಾನಮಂತ್ರಿ ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.

***