Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ನೇತಾಜಿ ಸುಭಾಷ್ ಚಂದ್ರ ಬೋಸ್ ಜಯಂತಿಯಂದು ಅವರಿಗೆ ಗೌರವ ವಂದನೆ ಸಲ್ಲಿಸಿದ ಪ್ರಧಾನಿ

ನೇತಾಜಿ ಸುಭಾಷ್ ಚಂದ್ರ ಬೋಸ್ ಜಯಂತಿಯಂದು ಅವರಿಗೆ ಗೌರವ ವಂದನೆ ಸಲ್ಲಿಸಿದ ಪ್ರಧಾನಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ನೇತಾಜಿ ಸುಭಾಷ್ ಚಂದ್ರ ಬೋಸ್ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.

“ಅವರ ಜನ್ಮ ದಿನದಂದು ನಾನು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರಿಗೆ ಗೌರವ ನಮನ ಸಲ್ಲಿಸುತ್ತೇನೆ. ವಸಾಹತುಶಾಹಿಯಿಂದ ಭಾರತವನ್ನು ಬಂಧಮುಕ್ತಗೊಳಿಸುವಲ್ಲಿ ಅವರ ಶೌರ್ಯ ಮಹತ್ವದ ಪಾತ್ರ ವಹಿಸಿದೆ.

ನೇತಾಜಿ ಬೋಸ್ ಅವರು ಶ್ರೇಷ್ಠ ಬುದ್ಧಿಜೀವಿಯಾಗಿದ್ದರು, ಅವರು ಸದಾ ಸಮಾಜದ ದುರ್ಬಲ ವರ್ಗದವರ ಕಲ್ಯಾಣಕ್ಕಾಗಿ ಮತ್ತು ಹಿತಕ್ಕಾಗಿ ಚಿಂತಿಸುತ್ತಿದ್ದರು.

ನೇತಾಜಿ ಬೋಸ್ ಅವರಿಗೆ ಸಂಬಂಧಿಸಿದ ಕಡತಗಳನ್ನು ಬಿಡುಗಡೆ ಮಾಡುವ ಮತ್ತು ದಶಕಗಳಿಂದ ಬಾಕಿ ಇದ್ದ ಜನಪ್ರಿಯ ಬೇಡಿಕೆ ಈಡೇರಿಸುವ ಅವಕಾಶ ನಮ್ಮ ಸರ್ಕಾರಕ್ಕೆ ಸಿಕ್ಕದು ಗೌರವದ ಸಂಗತಿ.

ನೇತಾಜಿ ಸುಭಾಷ್ ಚಂದ್ರ ಬೋಸ್ ಅವರಿಗೆ ಸಂಬಂಧಿಸಿದ ಕಡತಗಳು http://www.netajipapers.gov.in”, ನಲ್ಲಿ ಲಭ್ಯವಿದೆ ಎಂದು ಪ್ರಧಾನಿ ತಿಳಿಸಿದ್ದಾರೆ.

AKT/AK