Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ನೈನಿತಾಲ್ ನಲ್ಲಿ ಕಾರು ಕೊಚ್ಚಿ ಹೋಗಿ ಸಂಭವಿಸಿದ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ


ಉತ್ತರಾಖಂಡದ ನೈನಿತಾಲ್ ನಲ್ಲಿ ಕಾರು ಕೊಚ್ಚಿ ಹೋಗಿದ್ದರಿಂದ ಉಂಟಾದ ಜೀವಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಪ್ರಧಾನಿ ಕಾರ್ಯಾಲಯ ಟ್ವೀಟ್ ಮಾಡಿದ್ದು ಅದರಲ್ಲಿ;

“ನೈನಿತಾಲ್ ಜಿಲ್ಲೆಯಲ್ಲಿ ಕಾರು ಕೊಚ್ಚಿ ಹೋಗಿರುವುದರಿಂದ ಸಂಭವಿಸಿದ ದುರಂತದಿಂದ ನೋವಾಗಿದೆ. ಈ ದುಃಖದ ಸಮಯದಲ್ಲಿ, ದುಃಖತಪ್ತ ಕುಟುಂಬಗಳಿಗೆ ನನ್ನ ಸಂತಾಪಗಳು. ಸಿಕ್ಕಿಹಾಕಿಕೊಂಡವರನ್ನು ಪಾರುಮಾಡಲು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ: ಪ್ರಧಾನಿ” ಎಂದು ಹೇಳಲಾಗಿದೆ.

*********