Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಪದ್ಮಶ್ರೀ ಪುರಸ್ಕೃತ ರಾಮ್ ಸಹಾಯ್ ಪಾಂಡೆ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ


ಪ್ರಸಿದ್ಧ ಜಾನಪದ ಕಲಾವಿದ ಪದ್ಮಶ್ರೀ ಪುರಸ್ಕೃತ ರಾಮ್ ಸಹಾಯ್ ಪಾಂಡೆ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಎಕ್ಸ್ ಪೋಸ್ಟ್ ನಲ್ಲಿ ಬರೆದುಕೊಂಡಿರುವ ಪ್ರಧಾನಮಂತ್ರಿಗಳು;

“ಖ್ಯಾತ ಜಾನಪದ ಕಲಾವಿದ ಪದ್ಮಶ್ರೀ ಪುರಸ್ಕೃತ ರಾಮ್ ಸಹಾಯ್ ಪಾಂಡೆ ಅವರ ನಿಧನದಿಂದ ನನಗೆ ತೀವ್ರ ದುಃಖವಾಗಿದೆ. ತಮ್ಮ ಅದ್ಭುತ ಕಲೆ, ಸಮರ್ಪಣೆ ಮತ್ತು ಕಠಿಣ ಪರಿಶ್ರಮದಿಂದ ಅವರು ಬುಂದೇಲ್‌ಖಂಡದ ಜಾನಪದ ನೃತ್ಯ ರಾಯ್‌ಗೆ ಅಂತಾರಾಷ್ಟ್ರೀಯ ಖ್ಯಾತಿಯನ್ನು ತಂದರು. ಅವರ ನಿಧನವು ದೇಶದ ಕಲಾ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ. ಈ ದುಃಖದ ಸಮಯದಲ್ಲಿ ದೇವರು ಅವರ ಕುಟುಂಬ ವರ್ಗ ಮತ್ತು ಅಭಿಮಾನಿಗಳಿಗೆ ಶಕ್ತಿ ನೀಡಲಿ ಎಂದಿದ್ದಾರೆ. ಓಂ ಶಾಂತಿ!”

 

 

*****