Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಪರಮಪೂಜ್ಯ ಡಾ. ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮಿಗಳ ಜನ್ಮದಿನದಂದು ಪ್ರಧಾನಮಂತ್ರಿ ಅವರಿಂದ ಗೌರವ ನಮನ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪರಮಪೂಜ್ಯ ಡಾ. ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮಿ ಅವರ ಜನ್ಮ ದಿನಾಚರಣೆಯ ವಿಶೇಷ ಸಂದರ್ಭದಲ್ಲಿ ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.

ಸಹಾನುಭೂತಿ ಮತ್ತು ದಣಿವರಿಯದ ಸೇವೆಯ ದಾರಿದೀಪ ಎಂದು ಬಣ್ಣಿಸುತ್ತಾ, ಶ್ರೀ ಮೋದಿ ಅವರು, ಶಿವಕುಮಾರ ಸ್ವಾಮಿಯವರ ಅನನ್ಯ ಪ್ರಯತ್ನಗಳನ್ನು ಶ್ಲಾಘಿಸಿದ್ದಾರೆ. ನಿಸ್ವಾರ್ಥ ಸೇವೆಯು ಸಮಾಜವನ್ನು ಹೇಗೆ ಪರಿವರ್ತಿಸಬಲ್ಲದು ಎಂಬುದನ್ನು ಅವರು ತೋರಿಸಿಕೊಟ್ಟಿದ್ದಾರೆ ಎಂದು ಸ್ಮರಿಸಿದ್ದಾರೆ.  

ಅವರ ಎಕ್ಸ್ ಪೋಸ್ಟ್ ಹೀಗಿದೆ: 

“ಪರಮಪೂಜ್ಯ ಡಾ. ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಜಯಂತಿಯ ಈ ವಿಶೇಷ ಸಂದರ್ಭದಲ್ಲಿ ಅವರಿಗೆ ಹೃತ್ಪೂರ್ವಕ ನಮನಗಳು. ಕಾರುಣ್ಯ ಮತ್ತು ದಣಿವರಿಯದ ಸೇವೆಯ ದಾರಿದೀಪವೆಂದು ಅವರನ್ನು ಸ್ಮರಿಸಲಾಗುತ್ತದೆ. ನಿಸ್ವಾರ್ಥ ಸೇವೆಯು ಸಮಾಜವನ್ನು ಹೇಗೆ ಪರಿವರ್ತಿಸುತ್ತದೆ ಎಂಬುದನ್ನು ಅವರು ತೋರಿಸಿದ್ದಾರೆ. ನಾನಾ ಕ್ಷೇತ್ರಗಳಲ್ಲಿ ಅವರ ಅಸಾಧಾರಣ ಪ್ರಯತ್ನಗಳು ಪೀಳಿಗೆಗಳಿಗೆ ಸ್ಫೂರ್ತಿ ನೀಡುತ್ತಲೇ ಇವೆ.”

 

 

*****