Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಪರಾಕ್ರಮ್ ದಿವಸ್‌ ಸಂದರ್ಭ ವಿದ್ಯಾರ್ಥಿಗಳೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಸಂವಾದ

ಪರಾಕ್ರಮ್ ದಿವಸ್‌ ಸಂದರ್ಭ ವಿದ್ಯಾರ್ಥಿಗಳೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಸಂವಾದ


ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನವನ್ನು ಪರಾಕ್ರಮ್ ದಿವಸ್ ಎಂದು ಆಚರಿಸುವ ಸಂದರ್ಭದಲ್ಲಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿ ಯುವ ಸ್ನೇಹಿತರೊಂದಿಗೆ ವಿಶೇಷ ಸಂವಾದ ನಡೆಸಿದರು. 2047ರ ವೇಳೆಗೆ ರಾಷ್ಟ್ರದ ಗುರಿ ಏನು ಎಂದು ವಿದ್ಯಾರ್ಥಿಗಳಿಗೆ ವಿಚಾರಿಸಿದ ಪ್ರಧಾನಿ, ಇದಕ್ಕೆ ಅತ್ಯಂತ ಆತ್ಮವಿಶ್ವಾಸದಿಂದ ವಿದ್ಯಾರ್ಥಿಯೊಬ್ಬರು ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವುದು (ವಿಕಸಿತ ಭಾರತ) ಎಂದು  ಉತ್ತರಿಸಿದರು.2047 ರವರೆಗೆ ಮಾತ್ರ ಏಕೆ ಎಂದು ಪ್ರಧಾನ ಮಂತ್ರಿಯವರು ಕೇಳಿದಾಗ, ಇನ್ನೊಬ್ಬ ವಿದ್ಯಾರ್ಥಿಯು ಉತ್ತರಿಸಿದರು, “ಭಾರತವು ತನ್ನ ಸ್ವಾತಂತ್ರ್ಯದ ಶತಮಾನೋತ್ಸವವನ್ನು ಆಚರಿಸುತ್ತಿರುವಾಗ ನಮ್ಮ ಈಗಿನ ಪೀಳಿಗೆಯು ದೇಶ ಸೇವೆಗೆ ಸಿದ್ಧವಾಗಲಿದೆ” ಎಂದು.

ನಂತರ ಶ್ರೀ ಮೋದಿಯವರು ಇಂದಿನ ಮಹತ್ವದ ಬಗ್ಗೆ ವಿದ್ಯಾರ್ಥಿಗಳನ್ನು ಕೇಳಿದರು, ಅದಕ್ಕೆ ಅವರು ಒಡಿಶಾದ ಕಟಕ್‌ನಲ್ಲಿ ಜನಿಸಿದ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನವಿಂದು. ನೇತಾಜಿ ಬೋಸ್ ಅವರ ಜನ್ಮದಿನವನ್ನು ಆಚರಿಸಲು ಕಟಕ್‌ನಲ್ಲಿ ಅದ್ಧೂರಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಶ್ರೀ ಮೋದಿ ತಿಳಿಸಿದರು. ನಂತರ ಅವರು ಇನ್ನೊಬ್ಬ ವಿದ್ಯಾರ್ಥಿಯನ್ನು ಕೇಳಿ ನೇತಾಜಿಯವರ ಯಾವ ಮಾತು ನಿಮ್ಮನ್ನು ಹೆಚ್ಚು ಪ್ರೇರೇಪಿಸುತ್ತದೆ ಎಂದರು., ಅದಕ್ಕೆ ಅವರು “ನನಗೆ ರಕ್ತ ಕೊಡಿ ಮತ್ತು ನಾನು ನಿಮಗೆ ಸ್ವಾತಂತ್ರ್ಯವನ್ನು ನೀಡುತ್ತೇನೆ” ಎನ್ನುವ ಹೇಳಿಕೆ ಎಂದು ಉತ್ತರಿಸಿದರು. ನೇತಾಜಿ ಬೋಸ್ ಅವರು ಎಲ್ಲಕ್ಕಿಂತ ಹೆಚ್ಚಾಗಿ ತಮ್ಮ ದೇಶಕ್ಕೆ ಆದ್ಯತೆ ನೀಡುವ ಮೂಲಕ ನಿಜವಾದ ನಾಯಕತ್ವವನ್ನು ಪ್ರದರ್ಶಿಸಿದರು ಮತ್ತು ಈ ಸಮರ್ಪಣೆ ನಮಗೆ ಹೆಚ್ಚು ಸ್ಫೂರ್ತಿ ನೀಡುತ್ತಿದೆ ಎಂದು ವಿವರಿಸಿದರು. ನಂತರ ಪಿಎಂ ಅವರು ಸ್ಫೂರ್ತಿಯಿಂದ ನೀವು ಯಾವ ಕ್ರಮಗಳನ್ನು ಪಡೆಯುತ್ತೀರಿ ಎಂದು ಕೇಳಿದರು, ಅದಕ್ಕೆ ವಿದ್ಯಾರ್ಥಿನಿಯು ಸುಸ್ಥಿರ ಅಭಿವೃದ್ಧಿ ಗುರಿಗಳ (ಎಸ್‌ಡಿಜಿ) ಭಾಗವಾಗಿರುವ ರಾಷ್ಟ್ರದ ಇಂಗಾಲದ ಕಡಿಮೆ ಮಾಡಲು ಪ್ರೇರೇಪಿಸುತ್ತದೆ ಎಂದು ಉತ್ತರಿಸಿದರು. ಕಾರ್ಬನ್ ಫುಟ್‌ಪ್ರಿಂಟ್ ಅನ್ನು ಕಡಿಮೆ ಮಾಡಲು ಭಾರತದಲ್ಲಿ ಕೈಗೊಂಡ ಉಪಕ್ರಮಗಳ ಬಗ್ಗೆ ಪ್ರಧಾನಿ ನಂತರ ಹುಡುಗಿಯನ್ನು ಕೇಳಿದರು, ಅದಕ್ಕೆ ಅವರು ಎಲೆಕ್ಟ್ರಿಕ್ ವಾಹನಗಳು ಮತ್ತು ಬಸ್‌ಗಳನ್ನು ಪರಿಚಯಿಸಲಾಗಿದೆ ಎಂದು ಉತ್ತರಿಸಿದರು. ಕೇಂದ್ರ ಸರ್ಕಾರವು ಒದಗಿಸಿದ 1,200 ಕ್ಕೂ ಹೆಚ್ಚು ಎಲೆಕ್ಟ್ರಿಕ್ ಬಸ್‌ಗಳು ದೆಹಲಿಯಲ್ಲಿ ಕಾರ್ಯನಿರ್ವಹಿಸುತ್ತಿವೆ ಮತ್ತು ಇನ್ನೂ ಹೆಚ್ಚಿನದನ್ನು ಪರಿಚಯಿಸಲಾಗುವುದು ಎಂದು ಪ್ರಧಾನಮಂತ್ರಿ ಹೇಳಿದರು.

ಹವಾಮಾನ ಬದಲಾವಣೆಯನ್ನು ನಿಭಾಯಿಸುವ ಸಾಧನವಾಗಿ ಪ್ರಧಾನ ಮಂತ್ರಿ ಸೂರ್ಯಘರ್‌ ಯೋಜನೆ ಕುರಿತು ವಿದ್ಯಾರ್ಥಿಗಳಿಗೆ ಪ್ರಧಾನ ಮಂತ್ರಿ ವಿವರಿಸಿದರು. ಯೋಜನೆಯ ಅಂಗವಾಗಿ ಮನೆಯ ಚಾವಣಿಯ ಮೇಲೆ ಸೋಲಾರ್ ಪ್ಯಾನೆಲ್ ಗಳನ್ನು ಅಳವಡಿಸಿ ಸೌರಶಕ್ತಿಯ ಮೂಲಕ ವಿದ್ಯುತ್ ಉತ್ಪಾದಿಸಿದರೆ, ವಿದ್ಯುತ್ ಬಿಲ್ ಪಾವತಿ ಮಾಡುವ ಅನಿವಾರ್ಯತೆ ಇಲ್ಲದಂತಾಗಿದೆ ಎಂದರು. ಉತ್ಪಾದಿಸಿದ ವಿದ್ಯುಚ್ಛಕ್ತಿಯನ್ನು ಇ-ವಾಹನಗಳನ್ನು ಚಾರ್ಜ್ ಮಾಡಲು ಬಳಸಬಹುದು, ಇದರಿಂದಾಗಿ ಪಳೆಯುಳಿಕೆ ಇಂಧನಗಳ ಮೇಲಿನ ವೆಚ್ಚವನ್ನು ಕಡಿಮೆ ಮಾಡಬಹುದು ಮತ್ತು ಮಾಲಿನ್ಯವನ್ನು ನಿಯಂತ್ರಿಸಬಹುದು ಎಂದು ಅವರು ಹೇಳಿದರು. ಮನೆಯಲ್ಲಿ ಉತ್ಪತ್ತಿಯಾಗುವ ಯಾವುದೇ ಹೆಚ್ಚುವರಿ ವಿದ್ಯುತ್ ಅನ್ನು ವೈಯಕ್ತಿಕ ಬಳಕೆಯ ನಂತರ ಸರ್ಕಾರಕ್ಕೆ ಮಾರಾಟ ಮಾಡಬಹುದು, ಇದು ವಿತ್ತೀಯ ಪರಿಹಾರವನ್ನು ನೀಡುತ್ತದೆ ಎಂದು ಮೋದಿ ಅವರು ವಿದ್ಯಾರ್ಥಿಗಳಿಗೆ ತಿಳಿಸಿದರು. ಇದರರ್ಥ ನೀವು ಮನೆಯಲ್ಲಿ ವಿದ್ಯುತ್ ಉತ್ಪಾದಿಸಬಹುದು ಮತ್ತು ಅದನ್ನು ಲಾಭಕ್ಕಾಗಿ ಮಾರಾಟ ಮಾಡಬಹುದು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದರು.

 

 

*****