Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

“ಪರೀಕ್ಷಾ ಪೇ ಚರ್ಚಾ 2023” ಕಾರ್ಯಕ್ರಮಕ್ಕೆ ಸಂಬಂಧಿಸಿದ ಚಟುವಟಿಕೆಗಳಲ್ಲಿ ಭಾಗವಹಿಸಲು ವಿದ್ಯಾರ್ಥಿಗಳು, ಪೋಷಕರು ಮತ್ತು ಶಿಕ್ಷಕರಿಗೆ ಪ್ರಧಾನಮಂತ್ರಿಯವರಿಂದ ಆಹ್ವಾನ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿದ್ಯಾರ್ಥಿಗಳು, ಅವರ ಪೋಷಕರು ಮತ್ತು ಶಿಕ್ಷಕರನ್ನು “ಪರೀಕ್ಷಾ ಪೇ ಚರ್ಚಾ 2023” ಕಾರ್ಯಕ್ರಮಕ್ಕೆ ಸಂಬಂಧಿಸಿದ ಆಸಕ್ತಿದಾಯಕ ಚಟುವಟಿಕೆಗಳಲ್ಲಿ ಭಾಗವಹಿಸಲು ಆಹ್ವಾನಿಸಿದ್ದಾರೆ. ನಮ್ಮ ವಿದ್ಯಾರ್ಥಿಗಳಿಗೆ ಒತ್ತಡ-ಮುಕ್ತ ವಾತಾವರಣವನ್ನು ನಿರ್ಮಿಸಲು ಸಾಮೂಹಿಕವಾಗಿ ಕೆಲಸ ಮಾಡುವ ಅಗತ್ಯವನ್ನು ಪ್ರಧಾನಮಂತ್ರಿ ಒತ್ತಿ ಹೇಳಿದರು.

ಕೇಂದ್ರ ಶಿಕ್ಷಣ ಸಚಿವಾಲಯದ ಟ್ವೀಟ್ ಸಂದೇಶವನ್ನು ಉಲ್ಲೇಖಿಸಿ, ಪ್ರಧಾನಮಂತ್ರಿ ಅವರು ಈ ರೀತಿ ಟ್ವೀಟ್ ಮಾಡಿದ್ದಾರೆ;

“ಪರೀಕ್ಷಾ ಪೇ ಚರ್ಚಾ 2023” ಕಾರ್ಯಕ್ರಮಕ್ಕೆ ಸಂಬಂಧಿಸಿದ ಈ ಆಸಕ್ತಿದಾಯಕ ಚಟುವಟಿಕೆಗಳಲ್ಲಿ ಭಾಗವಹಿಸಲು ನಾನು ಎಲ್ಲಾ ಪರೀಕ್ಷಾ ಯೋಧರು(ವಿದ್ಯಾರ್ಥಿಗಳು), ಅವರ ಪೋಷಕರು ಮತ್ತು ಶಿಕ್ಷಕರಿಗೆ ಆಹ್ವಾನಿಸುತ್ತಿದ್ಧೇನೆ.  ನಮ್ಮ ವಿದ್ಯಾರ್ಥಿಗಳಿಗೆ ಒತ್ತಡ-ಮುಕ್ತ ವಾತಾವರಣವನ್ನು ನಿರ್ಮಿಸಲು ನಾವು ಒಟ್ಟಾಗಿ ಕೆಲಸ ಮಾಡೋಣ. #ಪಿಪಿಸಿ2023 ( #PPC2023) ” 

*****