ʻಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿʼ (ಪಿಎಂ-ಕಿಸಾನ್) ಅಡಿಯಲ್ಲಿ ಮುಂದಿನ ಕಂತಿನ ಆರ್ಥಿಕ ನೆರವನ್ನು ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಬಿಡುಗಡೆ ಮಾಡಿದರು. ಈ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರು ರೈತ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು. ಈ ಯೋಜನೆಯು 9.75 ಕೋಟಿಗೂ ಅಧಿಕ ಫಲಾನುಭವಿ ರೈತ ಕುಟುಂಬಗಳಿಗೆ 19,500 ಕೋಟಿ ರೂ.ಗಿಂತಲೂ ಅಧಿಕ ಹಣ ವರ್ಗಾವಣೆಯನ್ನು ಸಾಧ್ಯವಾಗಿಸಿದೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಅಡಿಯಲ್ಲಿ ನೀಡಲಾದ ಆರ್ಥಿಕ ನೆರವಿನ 9ನೇ ಕಂತು ಇದಾಗಿದೆ.
ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನ ಮಂತ್ರಿಗಳು ಬಿತ್ತನೆ ಋತುವಿನ ಬಗ್ಗೆ ಪ್ರಸ್ತಾಪಿಸಿದರು ಮತ್ತು ಇಂದು ರೈತರು ಪಡೆದ ಮೊತ್ತವು ಬಿತ್ತನೆ ಕಾರ್ಯಕ್ಕೆ ಸಹಾಯಕವಾಗುವ ಭರವಸೆಯನ್ನು ಅವರು ವ್ಯಕ್ತಪಡಿಸಿದರು. 1 ಲಕ್ಷ ಕೋಟಿ ರೂಪಾಯಿ ಮೀಸಲು ಹಣವನ್ನು ಹೊಂದಿರುವ ʻಕಿಸಾನ್ ಮೂಲಸೌಕರ್ಯ ನಿಧಿ ಯೋಜನೆʼಯೂ ಇಂದಿಗೆ ಒಂದು ವರ್ಷ ಪೂರ್ಣಗೊಳಿಸುತ್ತದೆ ಎಂದು ಅವರು ಉಲ್ಲೇಖಿಸಿದರು. ʻಮಿಷನ್ ಹನಿ ಬೀʼ ಹಾಗೂ ʻನಫೆಡ್ʼ(NAFED) ಮಳಿಗೆಗಳಲ್ಲಿ ಜಮ್ಮು-ಕಾಶ್ಮೀರದ ಕೇಸರಿ ಲಭ್ಯತೆಯಂತಹ ಉಪಕ್ರಮಗಳ ಬಗ್ಗೆ ಅವರು ವಿವರಿಸಿದರು. ʻಮಿಷನ್ ಹನಿ ಬೀʼ ಯೋಜನೆಯು 700 ಸಾವಿರ ಕೋಟಿ ಜೇನು ತುಪ್ಪ ರಫ್ತಿಗೆ ಕಾರಣವಾಗಿದೆ ಮತ್ತು ಆ ಮೂಲಕ ರೈತರಿಗೆ ಹೆಚ್ಚುವರಿ ಆದಾಯ ದೊರೆತಿದೆ ಎಂದರು.
ಮುಂಬರುವ 75ನೇ ಸ್ವಾತಂತ್ರ್ಯೋತ್ಸವ ದಿನವನ್ನು ಉಲ್ಲೇಖಿಸಿದ ಅವರು, ಇದು ಕೇವಲ ಹೆಮ್ಮೆಯ ಸಂದರ್ಭ ಮಾತ್ರವಲ್ಲ, ಇದು ಹೊಸ ನಿರ್ಣಯಗಳಿಗೆ ಒಂದು ಅವಕಾಶವಾಗಿದೆ ಎಂದು ಹೇಳಿದರು. ಮುಂಬರುವ 25 ವರ್ಷಗಳಲ್ಲಿ ನಾವು ಭಾರತವನ್ನು ಎಲ್ಲಿ ನೋಡಲು ಬಯಸುತ್ತೇವೆ ಎಂಬುದನ್ನು ನಿರ್ಧರಿಸಲು ನಾವು ಈ ಅವಕಾಶವನ್ನು ಬಳಸಿಕೊಳ್ಳಬೇಕು ಎಂದು ಅವರು ಕರೆ ನೀಡಿದರು. 2047ರಲ್ಲಿ ದೇಶವು ಸ್ವಾತಂತ್ರ್ಯ ಬಂದು 100 ವರ್ಷಗಳನ್ನು ಪೂರ್ಣಗೊಳಿಸಿದಾಗ ಭಾರತದ ಸ್ಥಿತಿಯನ್ನು ನಿರ್ಧರಿಸುವಲ್ಲಿ ನಮ್ಮ ಕೃಷಿ ಮತ್ತು ನಮ್ಮ ರೈತರ ಪಾತ್ರ ದೊಡ್ಡದು ಎಂದು ಪ್ರಧಾನಿ ಹೇಳಿದರು. ಹೊಸ ಸವಾಲುಗಳನ್ನು ಎದುರಿಸಲು, ಹೊಸ ಅವಕಾಶಗಳನ್ನು ಬಳಸಿಕೊಳ್ಳಲು ಮತ್ತು ಭಾರತದ ಕೃಷಿಯ ದಿಕ್ಕನ್ನು ನಿರ್ಧರಿಸಲು ಇದು ಸಕಾಲ. ಕಾಲಕಾಲಕ್ಕೆ ಬದಲಾಗುತ್ತಿರುವ ಬೇಡಿಕೆಗಳಿಗೆ ಅನುಗುಣವಾಗಿ ಭಾರತೀಯ ಕೃಷಿಯಲ್ಲಿ ಬದಲಾವಣೆ ಅಗತ್ಯ ಎಂದು ಅವರು ಕರೆ ನೀಡಿದರು. ಸಾಂಕ್ರಾಮಿಕದ ಸಮಯದಲ್ಲಿ ದಾಖಲೆಯ ಕೃಷಿ ಉತ್ಪಾದನೆಗಾಗಿ ರೈತರನ್ನು ಶ್ಲಾಘಿಸಿದ ಅವರು, ಕಠಿಣ ಸಮಯದಲ್ಲಿ ರೈತರ ಸಂಕಷ್ಟಗಳನ್ನು ಕಡಿಮೆ ಮಾಡಲು ಸರಕಾರ ಕೈಗೊಂಡ ಕ್ರಮಗಳ ಬಗ್ಗೆ ವಿವರಿಸಿದರು. ಸರಕಾರವು ಬೀಜ, ರಸಗೊಬ್ಬರ ಮತ್ತು ಮಾರುಕಟ್ಟೆಗಳ ಲಭ್ಯತೆಗೆ ಯಾವುದೇ ತೊಡಕಾಗದಂತೆ ನೋಡಿಕೊಂಡಿತು. ಎಲ್ಲಾ ಸಮಯದಲ್ಲೂ ಯೂರಿಯಾ ಲಭ್ಯತೆ ಕಾಯ್ದುಕೊಳ್ಳಲಾಗಿತ್ತು. ಜೊತೆಗೆ, ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ʻಡಿಎಪಿʼ ಬೆಲೆ ಹಲವು ಪಟ್ಟು ಹೆಚ್ಚಾದಾಗಲೂ ಸರಕಾರ ತಕ್ಷಣವೇ 12000 ಕೋಟಿ ರೂ. ಬಿಡುಗಡೆ ಮಾಡುವ ಮೂಲಕ ಹಳೆ ದರದಲ್ಲೇ ರೈತರಿಗೆ ಡಿಎಪಿ ಲಭ್ಯವಾಗುವಂತೆ ಹಾಗೂ ದರ ಹೆಚ್ಚಳದ ಹೊರೆ ರೈತರ ಮೇಲೆ ಬೀಳದಂತೆ ನೋಡಿಕೊಂಡಿತು ಎಂದರು.
ಅದು ಮುಂಗಾರು ಋತುವಾಗಿರಲಿ ಅಥವಾ ಹಿಂಗಾರು ಋತುವಾಗಿರಲಿ ಸರಕಾರ ರೈತರಿಂದ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಇದುವರೆಗಿನ ಅತಿ ದೊಡ್ಡ ಮಟ್ಟದ ಖರೀದಿ ಮಾಡಿದೆ. ಇದರಿಂದಾಗಿ ಸುಮಾರು 1,70,000 ಕೋಟಿ ರೂ. ಭತ್ತದ ಬೆಳಗಾರರ ಖಾತೆಗಳಿಗೆ ಮತ್ತು ಸುಮಾರು 85,000 ಕೋಟಿ ರೂ. ಗೋಧಿ ರೈತರ ಖಾತೆಗಳಿಗೆ ನೇರವಾಗಿ ತಲುಪಿದೆ ಎಂದು ಪ್ರಧಾನಿ ಹೇಳಿದರು.
ಕೆಲವು ವರ್ಷಗಳ ಹಿಂದೆ ದೇಶದಲ್ಲಿ ದ್ವಿದಳ ಧಾನ್ಯಗಳ ಕೊರತೆ ಕಂಡು ಬಂದಾಗ, ಅವುಗಳ ಉತ್ಪಾದನೆಯನ್ನು ಹೆಚ್ಚಿಸುವಂತೆ ರೈತರನ್ನು ತಾವು ಒತ್ತಾಯಿಸಿದ್ದಾಗಿ ಪ್ರಧಾನಿ ಸ್ಮರಿಸಿದರು. ಇದರ ಪರಿಣಾಮವಾಗಿ, ಕಳೆದ 6 ವರ್ಷಗಳಲ್ಲಿ ದೇಶದಲ್ಲಿ ದ್ವಿದಳ ಧಾನ್ಯಗಳ ಅಥವಾ ಬೇಳೆ ಕಾಳುಗಳ ಉತ್ಪಾದನೆಯಲ್ಲಿ ಸುಮಾರು 50 ಪ್ರತಿಶತ ಹೆಚ್ಚಳವಾಗಿದೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.
ಖಾದ್ಯ ತೈಲದಲ್ಲಿ ಸ್ವಾವಲಂಬನೆ ಸಾಧಿಸುವ ಪ್ರತಿಜ್ಞೆಯ ಭಾಗವಾಗಿ ಆರಂಭಿಸಲಾಗಿರುವ ʻರಾಷ್ಟ್ರೀಯ ಖಾದ್ಯ ತೈಲ ಮಿಷನ್-ಆಯಿಲ್ ಪಾಮ್ʼ (ಎನ್ಎಂಇಒ-ಒಪಿ) ಬಗ್ಗೆ ಪ್ರಧಾನಿ ಒತ್ತಿ ಹೇಳಿದರು. ಇಂದು ʻಭಾರತ ಬಿಟ್ಟು ತೊಲಗಿʼ (ಕ್ವಿಟ್ ಇಂಡಿಯಾ) ಚಳವಳಿಯ ಸ್ಮರಣಾರ್ಥ ದಿನ. ಈ ಐತಿಹಾಸಿಕ ದಿನದಂದು, ಈ ಸಂಕಲ್ಪವು ನಮಗೆ ಹೊಸ ಶಕ್ತಿಯನ್ನು ತುಂಬುತ್ತದೆ ಎಂದು ಅವರು ಹೇಳಿದರು. ʻರಾಷ್ಟ್ರೀಯ ಖಾದ್ಯ ತೈಲ ಮಿಷನ್-ಆಯಿಲ್ ಪಾಮ್ʼ ಯೋಜನೆ ಮೂಲಕ ಅಡುಗೆ ತೈಲ ಪರಿಸರ ವ್ಯವಸ್ಥೆಯಲ್ಲಿ 11,000 ಕೋಟಿ ರೂ.ಗಿಂತಲೂ ಹೆಚ್ಚು ಹೂಡಿಕೆ ಮಾಡಲಾಗುವುದು ಎಂದು ಅವರು ಮಾಹಿತಿ ನೀಡಿದರು. ಗುಣಮಟ್ಟದ ಬೀಜಗಳಿಂದ ಹಿಡಿದು ತಂತ್ರಜ್ಞಾನದವರೆಗೆ ರೈತರಿಗೆ ಎಲ್ಲಾ ಸೌಲಭ್ಯಗಳ ಖಾತರಿಯನ್ನು ಸರಕಾರ ಒದಗಿಸಿದೆ. ಇಂದು ಮೊದಲ ಬಾರಿಗೆ ಭಾರತವು ಕೃಷಿ ರಫ್ತಿಗೆ ಸಂಬಂಧಿಸಿದಂತೆ ವಿಶ್ವದ ಅಗ್ರ-10 ರಾಷ್ಟ್ರಗಳಲ್ಲಿ ಸ್ಥಾನ ಪಡೆದುಕೊಂಡಿದೆ ಎಂದು ಪ್ರಧಾನಿ ಗಮನ ಸೆಳೆದರು. ಕೊರೊನಾ ಅವಧಿಯಲ್ಲಿ ದೇಶವು ಕೃಷಿ ರಫ್ತಿನಲ್ಲಿ ಹೊಸ ದಾಖಲೆಗಳನ್ನು ಸೃಷ್ಟಿಸಿದೆ. ಇಂದು ಭಾರತವನ್ನು ಬೃಹತ್ ಕೃಷಿ ರಫ್ತು ದೇಶವನ್ನಾಗಿ ಗುರುತಿಸಲಾಗುತ್ತಿದೆ. ಇಂತಹ ಸಮಯದಲ್ಲಿ ನಮ್ಮ ಖಾದ್ಯ ತೈಲದ ಅಗತ್ಯಗಳಿಗಾಗಿ ಆಮದನ್ನು ಅವಲಂಬಿಸುವುದು ಸರಿಯಲ್ಲ ಎಂದರು.
ದೇಶದ ಕೃಷಿ ನೀತಿಗಳಲ್ಲಿ ಸಣ್ಣ ರೈತರಿಗೆ ಈಗ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದು ಪ್ರಧಾನಿ ಹೇಳಿದರು. ಈ ನಿಟ್ಟಿನಲ್ಲಿ, ಕಳೆದ ಕೆಲ ವರ್ಷಗಳಿಂದ ಈ ಸಣ್ಣ ರೈತರಿಗೆ ಅನುಕೂಲ ಹಾಗೂ ಭದ್ರತೆಯನ್ನು ಒದಗಿಸಲು ಗಂಭೀರ ಪ್ರಯತ್ನಗಳನ್ನು ಮಾಡಲಾಗುತ್ತಿದೆ. ʻಪಿಎಂ ಕಿಸಾನ್ ಸಮ್ಮಾನ್ ನಿಧಿʼ ಅಡಿಯಲ್ಲಿ, ಇಲ್ಲಿಯವರೆಗೆ ರೈತರಿಗೆ 1.60 ಲಕ್ಷ ಕೋಟಿ ರೂ.ಗಳನ್ನು ನೀಡಲಾಗಿದೆ. ಈ ಪೈಕಿ ಸಾಂಕ್ರಾಮಿಕದ ಅವಧಿಯಲ್ಲಿ ಸಣ್ಣ ರೈತರಿಗೆ 1 ಲಕ್ಷ ಕೋಟಿ ರೂ.ಗಳನ್ನು ವರ್ಗಾಯಿಸಲಾಗಿದೆ. ಕೊರೊನಾ ಸಾಂಕ್ರಾಮಿಕದ ಸಮಯದಲ್ಲಿ 2 ಕೋಟಿಗೂ ಹೆಚ್ಚು ʻಕಿಸಾನ್ ಕ್ರೆಡಿಟ್ ಕಾರ್ಡ್ʼಗಳನ್ನು ನೀಡಲಾಗಿದೆ. ಅವುಗಳಲ್ಲಿ ಹೆಚ್ಚಿನವು ಸಣ್ಣ ರೈತರಿಗೆ ದೊರೆತಿವೆ. ಅಂತಹ ರೈತರು ಮುಂದೆ ವಿಸ್ತರಣೆಯಾಗಲಿರುವ ಕೃಷಿ ಮೂಲಸೌಕರ್ಯ ಮತ್ತು ಸಂಪರ್ಕ ಮೂಲಸೌಕರ್ಯಗಳ ಅನುಕೂಲ ಪಡೆಯಲಿದ್ದಾರೆ. ʻಆಹಾರ ಪಾರ್ಕ್ಗಳುʼ, ʻಕಿಸಾನ್ ರೈಲುಗಳುʼ ಮತ್ತು ʻಮೂಲಸೌಕರ್ಯ ನಿಧಿʼಯಂತಹ ಉಪಕ್ರಮಗಳು ಸಣ್ಣ ರೈತರಿಗೆ ಸಹಾಯಕವಾಗಲಿವೆ. ಕಳೆದ ವರ್ಷದಲ್ಲಿ, ಮೂಲಸೌಕರ್ಯ ನಿಧಿಯ ಅಡಿಯಲ್ಲಿ 6 ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. ಈ ಕ್ರಮಗಳು ಸಣ್ಣ ರೈತರ ಮಾರುಕಟ್ಟೆ ಸಂಪರ್ಕವನ್ನು ಮತ್ತು ʻಎಪ್ಪಿಒʼಗಳ ಮೂಲಕ ಅವರ ಚೌಕಾಶಿ ಸಾಮರ್ಥ್ಯವನ್ನು ಹೆಚ್ಚಿಸುತ್ತವೆ ಎಂದು ಪ್ರಧಾನಿ ಹೇಳಿದರು.
***
9th instalment of #PMKisan is being released. Watch. https://t.co/adKzarnNaa
— Narendra Modi (@narendramodi) August 9, 2021
अब से कुछ दिन बाद ही 15 अगस्त आने वाला है।
— PMO India (@PMOIndia) August 9, 2021
इस बार देश अपना 75वां स्वतंत्रता दिवस मनाने जा रहा है।
ये महत्वपूर्ण पड़ाव हमारे लिए गौरव का तो है ही, ये नए संकल्पों, नए लक्ष्यों का भी अवसर है।
इस अवसर पर हमें तय करना है कि आने वाले 25 वर्षों में हम भारत को कहां देखना चाहते हैं: PM
देश जब आज़ादी के 100 वर्ष पूरे करेगा, 2047 में तब भारत की स्थिति क्या होगी, ये तय करने में हमारी खेती, हमारे किसानों की बहुत बड़ी भूमिका है।
— PMO India (@PMOIndia) August 9, 2021
ये समय भारत की कृषि को एक ऐसी दिशा देने का है, जो नई चुनौतियों का सामना कर सके और नए अवसरों का लाभ उठा सके: PM @narendramodi
सरकार ने खरीफ हो या रबी सीज़न, किसानों से MSP पर अब तक की सबसे बड़ी खरीद की है।
— PMO India (@PMOIndia) August 9, 2021
इससे, धान किसानों के खाते में लगभग 1 लाख 70 हज़ार करोड़ रुपए और गेहूं किसानों के खाते में लगभग 85 हज़ार करोड़ रुपए डायरेक्ट पहुंचे हैं: PM @narendramodi
कुछ साल पहले जब देश में दालों की बहुत कमी हो गई थी, तो मैंने देश के किसानों से दाल उत्पादन बढ़ाने का आग्रह किया था।
— PMO India (@PMOIndia) August 9, 2021
मेरे उस आग्रह को देश के किसानों ने स्वीकार किया।
परिणाम ये हुआ कि बीते 6 साल में देश में दाल के उत्पादन में लगभग 50 प्रतिशत की वृद्धि हुई है: PM @narendramodi
खाने के तेल में आत्मनिर्भरता के लिए अब राष्ट्रीय खाद्य तेल मिशन-ऑयल पाम यानि NMEO-OP का संकल्प लिया गया है।
— PMO India (@PMOIndia) August 9, 2021
आज जब देश भारत छोड़ो आंदोलन को याद कर रहा है, तो इस ऐतिहासिक दिन ये संकल्प हमें नई ऊर्जा से भर देता है: PM @narendramodi
इस मिशन के माध्यम से खाने के तेल से जुड़े इकोसिस्टम पर 11 हज़ार करोड़ रुपए से अधिक का निवेश किया जाएगा।
— PMO India (@PMOIndia) August 9, 2021
सरकार ये सुनिश्चित करेगी कि किसानों को उत्तम बीज से लेकर टेक्नॉलॉजी, हर सुविधा मिले: PM @narendramodi
आज भारत कृषि निर्यात के मामले में पहली बार दुनिया के टॉप-10 देशों में पहुंचा है। कोरोना काल में देश ने कृषि निर्यात के नए रिकॉर्ड बनाए हैं।
— PMO India (@PMOIndia) August 9, 2021
आज जब भारत की पहचान एक बड़े कृषि निर्यातक देश की बन रही है तब हम खाद्य तेल की अपनी ज़रूरतों के लिए आयात पर निर्भर रहें, ये उचित नहीं है: PM
अब देश की कृषि नीतियों में इन छोटे किसानों को सर्वोच्च प्राथमिकता दी जा रही है।
— PMO India (@PMOIndia) August 9, 2021
इसी भावना के साथ बीते सालों में छोटे किसानों को सुविधा और सुरक्षा देने का एक गंभीर प्रयास किया जा रहा है।
पीएम किसान सम्मान निधि के तहत अब तक 1 लाख 60 करोड़ रुपए किसानों को दिए गए हैं: PM
देश जब 2047 में आजादी के 100 वर्ष पूरे करेगा, तब भारत की स्थिति क्या होगी, यह तय करने में हमारी खेती, हमारे किसानों की बहुत बड़ी भूमिका है।
— Narendra Modi (@narendramodi) August 9, 2021
यह समय भारत की कृषि को एक ऐसी दिशा देने का है, जो नई चुनौतियों का सामना कर सके और नए अवसरों का लाभ उठा सके। #PMKisan pic.twitter.com/Fafc8rMpg5
खरीफ हो या रबी सीजन, सरकार ने किसानों से MSP पर अब तक की सबसे बड़ी खरीद की है।
— Narendra Modi (@narendramodi) August 9, 2021
किसान और सरकार की इसी साझेदारी के कारण आज भारत के अन्न भंडार भरे हुए हैं। #PMKisan pic.twitter.com/YtN2pOQNjA
आज जब भारत की पहचान एक बड़े कृषि निर्यातक की बन रही है, तब हम खाद्य तेल के लिए आयात पर निर्भर रहें, यह उचित नहीं है। इस स्थिति को अब बदलना है।
— Narendra Modi (@narendramodi) August 9, 2021
भारत में ऑयल-पाम की खेती की काफी संभावनाएं हैं। विशेष रूप से नॉर्थ ईस्ट और अंडमान-निकोबार द्वीप समूह में इसे बहुत बढ़ाया जा सकता है। pic.twitter.com/dZcirP4SGf
आने वाले 25 साल में देश की कृषि को समृद्ध करने में छोटे किसानों की बहुत बड़ी भूमिका रहने वाली है। इसलिए, देश की कृषि नीतियों में इन्हें सर्वोच्च प्राथमिकता दी जा रही है। #PMKisan pic.twitter.com/zHor4Ocpxb
— Narendra Modi (@narendramodi) August 9, 2021
गोवा की प्रतिभा वेलिपी जी से बात कर पता चला कि पीएम किसान सम्मान निधि किसान भाइयों और बहनों के कितने काम आ रही है। वे खेती में जिस प्रकार प्रयोग करके अलग-अलग फसल उगाती हैं, वो एक मिसाल है। pic.twitter.com/19pYzBJXpi
— Narendra Modi (@narendramodi) August 9, 2021
महाराष्ट्र के देवेंद्र जपदेकर जी ने सिविल इंजीनियरिंग की पढ़ाई के बाद भी कृषि के क्षेत्र को चुना और आज वे एक सफल आम उत्पादक हैं। उन्होंने सरकारी योजना के तहत मिले लोन से जुड़ा जो अनुभव बताया, वो अन्य किसानों को भी प्रेरित करने वाला है। pic.twitter.com/3RFvHZBU7d
— Narendra Modi (@narendramodi) August 9, 2021
उत्तर प्रदेश के कासगंज के श्यामाचरण उपाध्याय जी ने जिस प्रकार एफपीओ बनाकर किसानों को जोड़ा और सरकारी सुविधाएं लेकर उनकी आय बढ़ाने का काम किया, वो देश के किसानों को एक नई राह दिखाने वाला है। pic.twitter.com/PqoPTznqwO
— Narendra Modi (@narendramodi) August 9, 2021
जम्मू कश्मीर के केसर उत्पादक किसान अब्दुल मजीद वानी जी ने बताया कि किस प्रकार सरकार की कृषि योजनाओं से 2021 में ही उनकी आय दोगुनी हो चुकी है। pic.twitter.com/1gu7jvjcSd
— Narendra Modi (@narendramodi) August 9, 2021
उत्तराखंड के टिहरी-गढ़वाल के मशरूम उत्पादक सुशांत उनियाल जी ने यह साबित कर दिखाया है कि पहाड़ की जवानी पहाड़ के कितने काम आ सकती है। pic.twitter.com/doRgge0Y5N
— Narendra Modi (@narendramodi) August 9, 2021