Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಪುರುಷರ ಶಾಟ್‌ಪುಟ್‌ನಲ್ಲಿ ಕಂಚು ಗೆದ್ದ ಅಥ್ಲೀಟ್ ಹೊಕಾಟೊ ಹೊಟೊಜೆ ಸೆಮಾ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದಿಸಿದ್ದಾರೆ


ಪ್ಯಾರಿಸ್ ಪ್ಯಾರಾಲಿಂಪಿಕ್ಸ್‌ 2024ರಲ್ಲಿ ಪುರುಷರ ಶಾಟ್‌ಪುಟ್ ಎಫ್57 ವಿಭಾಗದಲ್ಲಿ ಕಂಚಿನ ಪದಕ ಗೆದ್ದ ಅಥ್ಲೀಟ್  ಹೊಕಾಟೊ ಹೊಟೊಜೆ ಸೆಮಾ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ. 

ಇದನ್ನು ಎಕ್ಸ್ ಪೋಸ್ಟ್ ನಲ್ಲಿ ಹಂಚಿಕೊಂಡಿರುವ ಅವರು,

“ಹೊಕಾಟೊ ಹೊಟೊಜೆ ಸೆಮಾ ಅವರು ಪುರುಷರ ಶಾಟ್‌ಪುಟ್ ಎಫ್ 57 ಪಂದ್ಯದಲ್ಲಿ ಕಂಚಿನ ಪದಕವನ್ನು ಗೆದ್ದು ತಂದಿರುವುದು ನಮ್ಮ ರಾಷ್ಟ್ರಕ್ಕೆ ಹೆಮ್ಮೆಯ ಕ್ಷಣ! ಅವರಲ್ಲಿರುವ ಅದ್ಭುತ ಶಕ್ತಿ ಮತ್ತು ದೃಢತೆಯು ಅಸಾಧಾರಣವಾಗಿದ್ದು, ಅವರಿಗೆ ಅಭಿನಂದನೆಗಳು. ಮುಂದಿನ ಪ್ರಯತ್ನಗಳಿಗೆ ಶುಭಾಶಯಗಳು” ಎಂದು ಬರೆದಿದ್ದಾರೆ.

#Cheer4Bharat

 

 

*****