Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಪ್ಯಾಲೆಸ್ಟೈನ್ ಅಧ್ಯಕ್ಷರನ್ನು ಭೇಟಿ ಮಾಡಿದ ಪ್ರಧಾನಮಂತ್ರಿ

ಪ್ಯಾಲೆಸ್ಟೈನ್ ಅಧ್ಯಕ್ಷರನ್ನು ಭೇಟಿ ಮಾಡಿದ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು 2024ರ ಸೆಪ್ಟೆಂಬರ್ 22ರಂದು ನ್ಯೂಯಾರ್ಕ್ ನಲ್ಲಿ ನಡೆದ ‘ಭವಿಷ್ಯದ ಶೃಂಗಸಭೆ’ಯ ನೇಪಥ್ಯದಲ್ಲಿ ಪ್ಯಾಲೆಸ್ಟೈನ್ ಅಧ್ಯಕ್ಷರಾದ ಘನತೆವೆತ್ತ ಮಹಮೂದ್ ಅಬ್ಬಾಸ್ ಅವರನ್ನು ಭೇಟಿ ಮಾಡಿದರು.

ಗಾಜಾದಲ್ಲಿ ಉದ್ಭವಿಸುತ್ತಿರುವ ಮಾನವೀಯ ಬಿಕ್ಕಟ್ಟು ಮತ್ತು ಈ ಪ್ರದೇಶದಲ್ಲಿ ಹದಗೆಡುತ್ತಿರುವ ಭದ್ರತಾ ಪರಿಸ್ಥಿತಿಯ ಬಗ್ಗೆ ಪ್ರಧಾನಮಂತ್ರಿಯವರು ತೀವ್ರ ಕಳವಳ ವ್ಯಕ್ತಪಡಿಸಿದರು. ಮಾನವೀಯ ನೆರವು ಸೇರಿದಂತೆ ಪ್ಯಾಲೆಸ್ಟೈನ್ ಜನರಿಗೆ ಭಾರತದ ಅಚಲ ಬೆಂಬಲವನ್ನು ಅವರು ಪುನರುಚ್ಚರಿಸಿದರು. ಇಸ್ರೇಲ್-ಪ್ಯಾಲೆಸ್ಟೈನ್ ವಿಷಯದಲ್ಲಿ ಭಾರತದ ಕಾಲನಿರ್ಣಯಿತ ತಾತ್ವಿಕ ನಿಲುವನ್ನು ಪುನರುಚ್ಚರಿಸಿದ ಪ್ರಧಾನಿಯವರು, ಕದನ ವಿರಾಮ, ಒತ್ತೆಯಾಳುಗಳ ಬಿಡುಗಡೆ ಮತ್ತು ಮಾತುಕತೆ ಮತ್ತು ರಾಜತಾಂತ್ರಿಕತೆಯ ಹಾದಿಗೆ ಮರಳಲು ಕರೆ ನೀಡಿದರು. ದ್ವಿರಾಷ್ಟ್ರೀಯ ಪರಿಹಾರ ಮಾತ್ರ ಈ ಪ್ರದೇಶದಲ್ಲಿ ಶಾಶ್ವತ ಶಾಂತಿ ಮತ್ತು ಸ್ಥಿರತೆಯನ್ನು ನೀಡುತ್ತದೆ ಎಂದು ಅವರು ಒತ್ತಿ ಹೇಳಿದರು. ಪ್ಯಾಲೆಸ್ಟೈನ್ ಅನ್ನು ಗುರುತಿಸಿದ ಮೊದಲ ದೇಶಗಳಲ್ಲಿ ಭಾರತವೂ ಒಂದು ಎಂಬುದನ್ನು ಸ್ಮರಿಸಿದ ಪ್ರಧಾನಿಯವರು, ವಿಶ್ವಸಂಸ್ಥೆಯಲ್ಲಿ ಪ್ಯಾಲೆಸ್ಟೈನ್ ಸದಸ್ಯತ್ವಕ್ಕೆ ಭಾರತದ ನಿರಂತರ ಬೆಂಬಲವನ್ನು ವ್ಯಕ್ತಪಡಿಸಿದರು.

ವಿಶ್ವಸಂಸ್ಥೆಯಲ್ಲಿ ಪ್ಯಾಲೆಸ್ಟೈನ್ ಗೆ ಭಾರತದ ಬೆಂಬಲ ಮತ್ತು ಶಿಕ್ಷಣ, ಆರೋಗ್ಯ ಮತ್ತು ಇತರ ಸಾಮರ್ಥ್ಯ ವರ್ಧನಾ ಪ್ರಯತ್ನಗಳಲ್ಲಿ ಪ್ಯಾಲೆಸ್ಟೈನ್ ಗೆ ದೊರೆಯುತ್ತಿರುವ ನೆರವು ಮತ್ತು ಬೆಂಬಲ ಸೇರಿದಂತೆ ಭಾರತ-ಪ್ಯಾಲೆಸ್ಟೈನ್ ದ್ವಿಪಕ್ಷೀಯ ಸಂಬಂಧಗಳ ವಿವಿಧ ಅಂಶಗಳ ಬಗ್ಗೆ ಉಭಯ ನಾಯಕರು ರಚನಾತ್ಮಕ ಚರ್ಚೆ ನಡೆಸಿದರು. ಇಬ್ಬರೂ ನಾಯಕರು ಭಾರತ-ಪ್ಯಾಲೆಸ್ಟೈನ್ ದ್ವಿಪಕ್ಷೀಯ ಸಂಬಂಧಗಳನ್ನು ಮತ್ತಷ್ಟು ಆಳಗೊಳಿಸುವ ಬದ್ಧತೆಯನ್ನು ಪುನರುಚ್ಚರಿಸಿದರು.

 

*****