Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಪ್ರಗತಿಯ ಮೂಲಕ ಪ್ರಧಾನಿ ಸಂವಾದ

ಪ್ರಗತಿಯ ಮೂಲಕ ಪ್ರಧಾನಿ ಸಂವಾದ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು,ನವದೆಹಲಿಯಲ್ಲಿಆಡಳಿತ ಪರವಾದ ಮತ್ತು ಸಕಾಲದ ಅನುಷ್ಠಾನ ಕುರಿತ ಐಸಿಟಿ ಆಧಾರಿತ ಬಹು ಮಾದರಿ ವೇದಿಕೆ ಪ್ರಗತಿಯ ಮೂಲಕನಡೆದಹತ್ತೊಂಬತ್ತನೇಸಂವಾದದ ಅಧ್ಯಕ್ಷತೆ ವಹಿಸಿದ್ದರು.

ಅಂಚೆ ಸೇವೆಗಳಿಗೆ ಸಂಬಂಧಿಸಿದ ಕುಂದುಕೊರತೆಯ ನಿರ್ವಹಣೆ ಮತ್ತು ಪರಿಹಾರದ ಪ್ರಗತಿಯನ್ನು ಅವರು ಪರಿಶೀಲಿಸಿದರು. ಈಗ ಮತ್ತೆ ಅಂಚೆ ಸೇವೆಗಳ ಮಹತ್ವ ಹೆಚ್ಚುತ್ತಿದೆ ಎಂದು ಅವರು ಹೇಳಿದರು. ಲೋಪಕ್ಕೆ ಕಾರಣರಾದ ಅಧಿಕಾರಿಗಳ ವಿರುದ್ಧ ಯಾವ ಕ್ರಮ ಜರುಗಿಸಲಾಗಿದೆ ಮತ್ತು ಪ್ರಕ್ರಿಯೆಗಳಲ್ಲಿ ಯಾವ ರೀತಿಯ ಬದಲಾವಣೆಗಳನ್ನು ಮಾಡಲಾಗಿದೆ ತಿಳಿಸಿ ಎಂದು ಕೇಳಿದರು. ಅಂಚೆ ಇಲಾಖೆಯಲ್ಲಿ ವ್ಯವಸ್ಥಿತ ಸುಧಾರಣೆ ಮತ್ತು ಮೂಲಸೌಕರ್ಯ ಬಲವರ್ಧನೆ ಹಾಗೂ ಮಾನವ ಸಂಪನ್ಮೂಲದ ನಿರ್ವಹಣೆಯ ಮಹತ್ವವನ್ನು ಒತ್ತು ಹೇಳಿದರು.

ಪ್ರಧಾನಮಂತ್ರಿಯವರು ಹಿಮಾಚಲ ಪ್ರದೇಶ, ಹರಿಯಾಣ, ಉತ್ತರಾಖಂಡ, ಉತ್ತರ ಪ್ರದೇಶ, ಆಂಧ್ರಪ್ರದೇಶ, ಕರ್ನಾಟಕ, ತಮಿಳುನಾಡು, ಒಡಿಶಾ, ಮಧ್ಯಪ್ರದೇಶ ಮತ್ತು ಮಹಾರಾಷ್ಟ್ರದಲ್ಲಿನ ವಿವಿಧ ರೈಲ್ವೆ, ರಸ್ತೆ ಮತ್ತು ಇಂಧನ ವಲಯದ ಪ್ರಮುಖ ಮೂಲಸೌಕರ್ಯ ಯೋಜನೆಗಳ ಪರಿಶೀಲನೆ ನಡೆಸಿದರು.

ಪ್ರಧಾನಮಂತ್ರಿಯವರು “ಅಪರಾಧ ಮತ್ತು ಅಪರಾಧ ಪತ್ತೆ ಜಾಲ ಮತ್ತು ವ್ಯವಸ್ಥೆ” (ಸಿಸಿಟಿಎನ್ಎಸ್)ಯ ಸಮಗ್ರ ಪರಿಶೀಲನೆ ನಡೆಸಿದರು. ಈ ಜಾಲಕ್ಕೆ ಉನ್ನತ ಆಧ್ಯತೆ ನೀಡುವಂತೆ ಅವರು ರಾಜ್ಯಗಳಿಗೆ ಮನವಿ ಮಾಡಿದರು. ಇದರಿಂದ ಕಾನೂನು ಮತ್ತು ಸುವ್ಯವಸ್ಥೆಯ ದೃಷ್ಟಿಯಿಂದ ಗರಿಷ್ಠ ಲಾಭ ಪಡೆದುಕೊಳ್ಳಬಹುದು ಮತ್ತು ಅಪರಾಧಿಗಳನ್ನು ನ್ಯಾಯದ ಪರಿಧಿಗೆ ತರಬಹುದು ಎಂದರು.

*****

AKT/NT