Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಪ್ರಧಾನಮಂತ್ರಿಯವರಿಂದ ಪಿಎಂ-ಶ್ರೀ ಯೋಜನೆಯ  ಘೋಷಣೆ


ಇಂದು ಶಿಕ್ಷಕರ ದಿನಾಚರಣೆಯ ಸಂದರ್ಭದಲ್ಲಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಯವರು ಪಿಎಂ ಸ್ಕೂಲ್ಸ್ ಫಾರ್ ರೈಸಿಂಗ್ ಇಂಡಿಯಾ (ಪಿಎಂ- ಶ್ರೀ) ಯೋಜನೆ ಅಡಿಯಲ್ಲಿ ಯೋಜನೆಯಡಿಯಲ್ಲಿ 14,500 ಶಾಲೆಗಳ ಅಭಿವೃದ್ಧಿ ಮತ್ತು ಮೇಲ್ದರ್ಜೆಗೇರಿಸುವಿಕೆಯನ್ನು ಘೋಷಿಸಿದ್ದಾರೆ.

ಪಿಎಂ- ಶ್ರೀ ಶಾಲೆಗಳು ಶಿಕ್ಷಣವನ್ನು ನೀಡುವ ಆಧುನಿಕ, ಪರಿವರ್ತನೆಯ ಮತ್ತು ಸಮಗ್ರ ವಿಧಾನವನ್ನು ಹೊಂದಿರುತ್ತದೆ. ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿರುವಂತೆ  ಪಿಎಂ-ಶ್ರೀ ಶಾಲೆಗಳು ಭಾರತದಾದ್ಯಂತ ಲಕ್ಷಗಟ್ಟಲೆ ವಿದ್ಯಾರ್ಥಿಗಳಿಗೆ ಮತ್ತಷ್ಟು ಪ್ರಯೋಜನವನ್ನು ನೀಡುತ್ತವೆ ಎಂಬುದು ನನಗೆ ಖಚಿತವಾಗಿದೆ ಎಂದು ಶ್ರೀ ಮೋದಿ ಹೇಳಿದರು.

ಪ್ರಧಾನಮಂತ್ರಿಯವರು ಹೀಗೆ ಟ್ವೀಟ್ ಮಾಡಿದ್ದಾರೆ;

“ಇಂದು, #ಶಿಕ್ಷಕರ ದಿನದಂದು #TeachersDay  ನಾನು ಹೊಸ ಉಪಕ್ರಮವನ್ನು ಘೋಷಿಸಲು ಸಂತೋಷಪಡುತ್ತೇನೆ – ಪಿಎಂ ಸ್ಕೂಲ್ಸ್ ಫಾರ್ ರೈಸಿಂಗ್ ಇಂಡಿಯಾ (ಪಿಎಂ – ಶ್ರೀ) (PM-SHRI) ಯೋಜನೆಯಡಿಯಲ್ಲಿ ಭಾರತದಾದ್ಯಂತ 14,500 ಶಾಲೆಗಳ ಅಭಿವೃದ್ಧಿ ಮತ್ತು ಮೇಲ್ದರ್ಜೆಗೇರಿಸುವಿಕೆ. ರಾಷ್ಟ್ರೀಯ ಶಿಕ್ಷಣ ನೀತಿ 2020 ರ ದೃಷ್ಟಿಗೆ ಅನುಗುಣವಾಗಿ  ಸಂಪೂರ್ಣವಾಗಿರುವ ಮಾದರಿ ಶಾಲೆಗಳಾಗುತ್ತವೆ.”

” ಪಿಎಂ – ಶ್ರೀ ಶಾಲೆಗಳು ಶಿಕ್ಷಣವನ್ನು ನೀಡುವ ಆಧುನಿಕ, ಪರಿವರ್ತನೆಯ ಮತ್ತು ಸಮಗ್ರ ವಿಧಾನವನ್ನು ಹೊಂದಿರುತ್ತವೆ. ಅನ್ವೇಷಣೆ-ಆಧಾರಿತ, ವಿದ್ಯಾರ್ಥಿ-ಕೇಂದ್ರಿತ ಬೋಧನೆಯ ಮಾರ್ಗಕ್ಕೆ ಒತ್ತು ನೀಡಲಾಗುವುದು. ಇತ್ತೀಚಿನ ತಂತ್ರಜ್ಞಾನ, ಸ್ಮಾರ್ಟ್ ತರಗತಿಗಳು, ಕ್ರೀಡೆಗಳು ಮತ್ತು ಹೆಚ್ಚಿನವುಗಳನ್ನು ಒಳಗೊಂಡಂತೆ ಆಧುನಿಕ ಮೂಲಸೌಕರ್ಯಗಳ ಮೇಲೆ ಕೇಂದ್ರೀಕರಿಸಲಾಗುತ್ತದೆ. “

“ಇತ್ತೀಚಿನ ವರ್ಷಗಳಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯು ಶಿಕ್ಷಣ ಕ್ಷೇತ್ರವನ್ನು ಮಾರ್ಪಡಿಸಿದೆ. ಪಿಎಂ- ಶ್ರೀ ಶಾಲೆಗಳು ಶಾಲೆಗಳು ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿರುವಂತೆ  ಭಾರತದಾದ್ಯಂತ ಲಕ್ಷಗಟ್ಟಲೆ ವಿದ್ಯಾರ್ಥಿಗಳಿಗೆ ಮತ್ತಷ್ಟು ಪ್ರಯೋಜನವನ್ನು ನೀಡುತ್ತವೆ ಎಂಬುದು ನನಗೆ ಖಚಿತವಾಗಿದೆ “

Today, on #TeachersDay I am glad to announce a new initiative – the development and upgradation of 14,500 schools across India under the Pradhan Mantri Schools For Rising India (PM-SHRI) Yojana. These will become model schools which will encapsulate the full spirit of NEP.

— Narendra Modi (@narendramodi) September 5, 2022

*****