Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಬಾಂಗ್ಲಾದೇಶದ ವಿದೇಶಾಂಗ ಸಚಿವರು

ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಬಾಂಗ್ಲಾದೇಶದ ವಿದೇಶಾಂಗ ಸಚಿವರು

ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಬಾಂಗ್ಲಾದೇಶದ ವಿದೇಶಾಂಗ ಸಚಿವರು


ಬಾಂಗ್ಲಾದೇಶದ ವಿದೇಶಿ ವ್ಯವಹಾರ ಸಚಿವರಾದ ಗೌರವಾನ್ವಿತ ಡಾ.ಎ.ಕೆ. ಅಬ್ದುಲ್ ಮೊಮೆನ್ ಅವರಿಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಪ್ರಧಾನಮಂತ್ರಿ ಅವರು ವಿದೇಶಾಂಗ ಸಚಿವರಾಗಿ ನೇಮಕಗೊಂಡುದಕ್ಕಾಗಿ ಡಾ. ಅಬ್ದುಲ್ ಮೊಮೆನ್ ಅವರನ್ನು ಅಭಿನಂದಿಸಿದರು ಮತ್ತು ಅವರ ಮೊದಲ ವಿದೇಶ ಪ್ರಯಾಣದ ದೇಶವಾಗಿ ಭಾರತವನ್ನು ಆಯ್ಕೆ ಮಾಡಿಕೊಂಡುದಕ್ಕಾಗಿ ಅವರ ಸೌಜನ್ಯಕ್ಕೆ ಪ್ರಧಾನಮಂತ್ರಿ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ದ್ವಿಪಕ್ಷೀಯ ಸಂಬಂಧದಲ್ಲಿ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಡಾ. ಅಬ್ದುಲ್ ಮೊಮೆನ್ ಅವರು ಪ್ರಧಾನ ಮಂತ್ರಿ ಅವರಿಗೆ ವಿವರಿಸಿದರು.

ಭಾರತ –ಬಾಂಗ್ಲಾದೇಶದ ನಡುವಿನ ಸಂಬಂಧಗಳು ಕಳೆದ ಕೆಲವು ವರ್ಷಗಳಿಂದ ಮೇಲ್ಮುಖವಾಗಿ ಬೆಳೆಯುತ್ತಿವೆ ಎಂದು ಪ್ರಧಾನ ಮಂತ್ರಿ ಅವರು ಹೇಳಿದರು. ಪ್ರಧಾನಮಂತ್ರಿ ಶೇಖ್ ಹಸೀನಾ ಅವರ ಹೊಸ ಅಧಿಕಾರಾವಧಿಯಲ್ಲಿ ಇದೇ ವೇಗದಲ್ಲಿ ಬಾಂಗ್ಲಾದೇಶದ ಜೊತೆ ಕೆಲಸ ಮಾಡಲು ಭಾರತ ಬದ್ದವಾಗಿದೆ ಎಂಬುದನ್ನು ಪ್ರಧಾನಮಂತ್ರಿ ಅವರು ಪುನರುಚ್ಚರಿಸಿದರು.